
Tragic: ದೇವರ ದರ್ಶನದಿಂದ ವಾಪಾಸಾಗುವ ವೇಳೆ ದುರಂತ: ಕಾರು– ಟ್ರಕ್ ಅಪಘಾತದಲ್ಲಿ 8ಮಂದಿ ಸಾವು
Team Udayavani, Oct 4, 2023, 11:29 AM IST

ಲಕ್ನೋ: ಕಾರು – ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬುಧವಾರ ಮುಂಜಾನೆ (ಅ.4 ರಂದು) ನಡೆದಿದೆ.
ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಢಿಕ್ಕಿ ಹೊಡೆದಿದೆ. ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ.
ಮೃತರನ್ನು ವಿಪಿನ್ ಯಾದವ್ ಮತ್ತು ಅವರ ತಾಯಿ ಗಂಗಾ ಯಾದವ್, ಮಹೇಂದ್ರ ವರ್ಮಾ ಮತ್ತು ಅವರ ಪತ್ನಿ ಚಂದ್ರಕಾಳಿ , ರಾಜೇಂದ್ರ ಯಾದವ್ ಎಂದು ಗುರುತಿಸಲಾಗಿದೆ. ಇನ್ನು ಮೂವರ ಗುರುತು ಪರಿಚಯ ಇನ್ನಷ್ಟೇ ಆಗಬೇಕಿದೆ.
ಕಾರಿನ ಚಾಲಕ ಸೇರಿ 8 ಮಂದಿ ಮೃತಪಟ್ಟಿದ್ದು, 3 ವರ್ಷದ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಮೃತರು ದೇವರ ದರ್ಶನ ಪಡೆದು ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ.
ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸದ್ದಾರೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗಾಗಿ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.