ರಾಜ್ಯಕ್ಕೆ 8 ಪದ್ಮ ಪ್ರಶಸ್ತಿ ;ಯು ಆರ್ ರಾವ್‌ಗೆ ಪದ್ಮವಿಭೂಷಣ
Team Udayavani, Jan 26, 2017, 3:45 AM IST
ಹೊಸದಿಲ್ಲಿ: ದೇಶದ 2ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದೆ ನಿಸಿಕೊಂಡಿರುವ ಪದ್ಮವಿಭೂಷಣ ಗೌರವಕ್ಕೆ ರಾಜ್ಯದ ಹೆಸರಾಂತ ಬಾಹ್ಯಾಕಾಶ ವಿಜ್ಞಾನಿ ಪ್ರೊ| ಯು.ಆರ್. ರಾವ್, ಖ್ಯಾತ ಗಾಯಕ ಕೆ.ಜೆ. ಯೇಸುದಾಸ್, ಸದ್ಗುರು ಜಗ್ಗಿ ವಾಸುದೇವ್, ಶರದ್ ಪವಾರ್, ಮುರಳಿ ಮನೋಹರ ಜೋಷಿ ಪಾತ್ರರಾಗಿದ್ದಾರೆ.
ಇತ್ತೀಚೆಗಷ್ಟೇ ನಿಧನ ಹೊಂದಿದ ಹಿರಿಯ ಪತ್ರಕರ್ತ ಚೋ. ರಾಮಸ್ವಾಮಿ ಸಹಿತ ಏಳು ಮಂದಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಆದರೆ ಈ ಪಟ್ಟಿಯಲ್ಲಿ ಕರ್ನಾಟಕದವರು ಯಾ ರೂ ಇಲ್ಲ. ಒಟ್ಟಾರೆ ಈ ಬಾರಿ ಎಂಟು ಮಂದಿ ಕರ್ನಾಟಕದವರಿಗೆ ಪದ್ಮ ಪ್ರಶಸ್ತಿ ಲಭಿ ಸಿದೆ. ವಿಶೇಷವೆಂದರೆ, ಚುನಾವಣಾ ರಾಜ್ಯ ಉತ್ತರ ಪ್ರದೇಶದ ಐದು ಮಂದಿಗೆ ಮಾತ್ರ ಪ್ರಶಸ್ತಿ ನೀಡಲಾಗಿದೆ.
ಕರ್ನಾಟಕದ ಬಾಹ್ಯಾಕಾಶ ವಿಜ್ಞಾನಿ ಪ್ರೊ| ಯು.ಆರ್. ರಾವ್ ಅವರಿಗೆ ಪದ್ಮ ವಿಭೂಷಣ, ಭಾಷಾ ತಜ್ಞ ಪ್ರೊ| ಜಿ. ವೆಂಕಟ ಸುಬ್ಬಯ್ಯ, ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್, ಜಾನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ, ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಅಂಧರ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ, ಡಿಸ್ಕಸ್ ಪಟು ವಿಕಾಸ್ ಗೌಡ ಮತ್ತು ದಿಲ್ಲಿಯಲ್ಲಿರುವ “ಸಂಸ್ಕೃತಿ ಭಾರತಿ’ಯ ಸ್ಥಾಪಕ ಚಾ. ಮು. ಕೃಷ್ಣ ಶಾಸ್ತ್ರಿ ಅವರಿಗೆ ಪದ್ಮಶ್ರೀ ಗೌರವ ಲಭಿಸಿದೆ. ಚಾ.ಮು. ಕೃಷ್ಣ ಶಾಸ್ತ್ರಿ ಸಂಸ್ಕೃತವನ್ನು ದೇಶ-ವಿದೇಶ ಗಳಿಗೆ ಹರಡಿಸಿದ ಹಿರಿಮೆಗೆ ಪಾತ್ರ ರಾಗಿದ್ದಾರೆ. ಇದೇ ವೇಳೆ ಈ ಬಾರಿ ಒಟ್ಟು 89 ಮಂದಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಇದರಲ್ಲಿ 75 ಮಂದಿಗೆ ಪದ್ಮಶ್ರೀ, ಏಳು ಮಂದಿಗೆ ಪದ್ಮವಿಭೂಷಣ ಮತ್ತು ಏಳು ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ 19 ಮಹಿಳೆಯರು, ಐವರು ವಿದೇಶೀಯರು ಮತ್ತು 6 ಮಂದಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.