ಎರಡು ವಾರದ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ, ಕೊಲೆ ಶಂಕೆ
Team Udayavani, Aug 22, 2022, 8:24 AM IST
ನವದೆಹಲಿ: ಎರಡು ವಾರಗಳ ಹಿಂದೆ ನಾಪತ್ತೆಯಾಗಿದ್ದ ಎಂಟು ವರ್ಷದ ಬಾಲಕಿಯ ಶವ ನವದೆಹಲಿಯ ಯಮುನಾ ಖಾದರ್ ಪ್ರದೇಶದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆಗಸ್ಟ್ 5 ರಂದು ತನ್ನ ಮನೆಯಿಂದ ಬಾಲಕಿ ಕಾಣೆಯಾಗಿದ್ದ ಕುರಿತು ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಬಾಲಕಿಯ ಶವ ಆಗಸ್ಟ್ 18 ರಂದು ಕೊಲೆಯಾದ ಸ್ಥಿತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಕೇಸು ದಾಖಲುಗೊಳಿಸಲಾಗಿದ್ದು, ಬಾಲಕಿಯ ಕತ್ತು ಸೀಳಿದ ರೀತಿಯಲ್ಲಿ ಮೃತದೇಹ ಕಂಡುಬಂದಿದೆ, ಇದರಿಂದ ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಪಹರಣಕಾರರು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿ ನದಿ ದಡದಲ್ಲಿ ಎಸೆದಿರುವ ಅನುಮಾನಗಳೂ ಇದ್ದು ಎಲ್ಲ ರೀತಿಯಲ್ಲೂ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಕಛೇರಿಗೆ ಸಾವರ್ಕರ್ ಫೋಟೋ ಅಂಟಿಸಿದ ಕಿಡಿಗೇಡಿಗಳು : ಬಸವನಾಡಲ್ಲೂ ಸಾವರ್ಕರ್ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.