Temple Collapse: ವರುಣನ ಆರ್ಭಟ… ದೇವಸ್ಥಾನ ಕುಸಿದು 9 ಮೃತ್ಯು, ಹಲವರು ಸಿಲುಕಿರುವ ಶಂಕೆ
Team Udayavani, Aug 14, 2023, 12:11 PM IST
ಶಿಮ್ಲಾ: ಸೋಮವಾರ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ.
ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಹದಿನೈದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸೋಮವಾರವಾದ ಹಿನ್ನೆಲೆಯಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ.
ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಈಗಾಗಲೇ ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಐವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಕಾಣೆಯಾಗಿದ್ದಾನೆ ಎನ್ನಲಾಗಿದೆ.
ಮುಖ್ಯಮಂತ್ರಿ ಭೇಟಿ
ಘಟನಾ ಸ್ಥಳಕ್ಕೆ ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ರಕ್ಷಣಾ ಕಾರ್ಯಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡುವಂತೆ ಸೂಚನೆ ನೀಡಿದ್ದಾರೆ ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Tumkur: ಸಿದ್ದಗಂಗಾ ಮಠದ ಕೃಷಿ ಹೊಂಡದಲ್ಲಿ ನೀರು ಪಾಲಾಗಿದ್ದ ಮತ್ತೆರಡು ಮೃತದೇಹ ಪತ್ತೆ
Distressing news has emerged from Shimla, where the “Shiv Mandir” at Summer Hill collapsed as a result of the heavy rainfall.
As of now, nine bodies have been retrieved. The local administration is diligently working to clear the debris in order to rescue individuals who may…
— Sukhvinder Singh Sukhu (@SukhuSukhvinder) August 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.