ಸಿಂಘು ಗಡಿಯಲ್ಲಿ 1500 ರೈತ ಸಂಘಟನೆಗಳ ಬೃಹತ್ ಸಮಾವೇಶ ಆರಂಭ
Team Udayavani, Aug 26, 2021, 10:30 PM IST
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆಗೆ 9 ತಿಂಗಳು ಪೂರೈ ಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತದ ರೈತ ಸಂಘಟನೆಗಳ ಸುಮಾರು 1,500 ಪ್ರತಿನಿಧಿಗಳು ಗುರುವಾರ ದೆಹ ಲಿಯ ಸಿಂಘು ಗಡಿಗೆ ತಲುಪಿದ್ದು, ಅಲ್ಲಿ ರೈತರ ಬೃಹತ್ ಸಮಾವೇಶ ಆರಂಭವಾಗಿದೆ. 2 ದಿನಗಳ ಕಾಲ ಈ ಸಮಾವೇಶ ನಡೆಯಲಿದೆ.
ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟೀಕಾಯತ್ ಅವರು ಈ ಸಮಾವೇಶಕ್ಕೆ ಗುರುವಾರ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ:ಸಂತ್ರಸ್ತ ಯುವತಿಯನ್ನು ನಾನು ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ : ಸಚಿವ ಆರಗ ಜ್ಞಾನೇಂದ್ರ
ಕೃಷಿ ಕಾಯ್ದೆ ವಿರೋಧಿ ಹೋರಾಟವನ್ನು ದೇಶಾದ್ಯಂತ ಬಿರುಸುಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. 9 ತಿಂಗಳಿಂದ ಹೋರಾಟ ನಡೆಸು ತ್ತಿದ್ದರೂ ಕೇಂದ್ರ ಸರ್ಕಾರವು ಮಾತುಕತೆಗೆ ಮುಂದಾಗದೇ ಇರುವುದು ನೋವಿನ ಸಂಗತಿ.ಹಾಗಂತೆ ನಾವೇನೂ ಹಿಂದೆ ಸರಿಯುವುದಿಲ್ಲ. ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಟೀಕಾಯತ್ ಘೋಷಿಸಿದ್ದಾರೆ.
22 ರಾಜ್ಯಗಳ 300ರಷ್ಟು ರೈತ- ಕೃಷಿ ಕಾರ್ಮಿಕರ ಸಂಘಟನೆಗಳು, 18 ಅಖೀಲ ಭಾರತ ಕಾರ್ಮಿಕ ಒಕ್ಕೂಟಗಳು, 9 ಮಹಿಳಾ ಸಂಘಟ ನೆಗಳು 17 ವಿದ್ಯಾರ್ಥಿ-ಯುವ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.