ಮತ್ತೆ 9 ಶಿಶುಗಳ ಸಾವು;ಕೋಟಾ JK ಲೋನ್ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ಸಂಖ್ಯೆ 100ಕ್ಕೆ ಏರಿಕೆ
ಸರ್ಕಾರಿ ಮೆಡಿಕಲ್ ಕಾಲೇಜುಗಳ ಯಂತ್ರೋಪಕರಣಗಳ ಬಗ್ಗೆ ವರದಿ ಕಳುಹಿಸುವಂತೆ ರಾಜ್ಯ ಸರ್ಕಾರ ಸೂಚನೆ
Team Udayavani, Jan 2, 2020, 6:01 PM IST
ಜೈಪುರ್: ರಾಜಸ್ಥಾನ ಕೋಟಾದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಲ್ಲಿ ಮತ್ತೆ ಒಂಬತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇದರೊಂದಿಗೆ 2019ರ ಡಿಸೆಂಬರ್ ನಿಂದ ಈವರೆಗೆ ಸಾವನ್ನಪ್ಪಿರುವ ಮಕ್ಕಳ ಸಂಖ್ಯೆ 100ಕ್ಕೆ ಏರಿಕೆಯಾದಂತಾಗಿದೆ.
2018ರ ಡಿಸೆಂಬರ್ ತಿಂಗಳಿನಲ್ಲಿ ಇದೇ ಆಸ್ಪತ್ರೆಯಲ್ಲಿ ಸುಮಾರು 77 ನವಜಾತ ಶಿಶುಗಳು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 2019ರ ಡಿಸೆಂಬರ್ 30, 31ರಂದು ಜೆಕೆ ಲೋನ್ ಆಸ್ಪತ್ರೆಯಲ್ಲಿ ನವಜಾತ ಹಾಗೂ ಮಕ್ಕಳು ಸೇರಿದಂತೆ 9 ಸಾವು ಸಂಭವಿಸಿದೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ ಸಾವನ್ನಪ್ಪಿರುವ ಮಕ್ಕಳ ಸಂಖ್ಯೆ 100ಕ್ಕೆ ಏರಿಕೆಯಾದಂತಾಗಿದೆ ಎಂದು ಆಸ್ಪತ್ರೆಯ ಸೂಪರಿಟೆಂಡೆಂಟ್ ಡಾ.ಸುರೇಶ್ ದುಲಾರಾ ತಿಳಿಸಿದ್ದಾರೆ.
ಎಲ್ಲಾ ಮಕ್ಕಳು ಕಡಿಮೆ ತೂಕದ ಹಿನ್ನೆಲೆಯಲ್ಲಿ ಸಾವನ್ನಪ್ಪಿರುವುದಾಗಿ ಡಾ.ಸುರೇಶ್ ವಿವರಿಸಿದ್ದಾರೆ. ಪ್ರಕರಣದ ಬಗ್ಗೆ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜುಗಳ ಯಂತ್ರೋಪಕರಣಗಳ ಕಾರ್ಯನಿರ್ವಹಣೆ ಬಗ್ಗೆ ವರದಿಯನ್ನು ಕಳುಹಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್ಎಫ್ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.