ಬರೋಬ್ಬರಿ 918 ಕೆಜಿಯ ಕಿಚಡಿ ಗಿನ್ನೆಸ್ಗೆ ಸೇರ್ಪಡೆ
Team Udayavani, Nov 5, 2017, 6:45 AM IST
ನವದೆಹಲಿ: ಕಿಚಡಿಯನ್ನು ರಾಷ್ಟ್ರೀಯ ಆಹಾರ ಎಂದು ಘೋಷಿಸಲಾಗುವುದು ಎಂಬ ಪುಕಾರುಗಳು ಹರಿದಾಡುತ್ತಿರುವಂತೆಯೇ, ಭಾರತದ ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅವರು ಕಿಚಡಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿದ್ದಾರೆ. ಅದು ಹೇಗೆ ಗೊತ್ತಾ? ಬರೋಬ್ಬರಿ 918 ಕೆ.ಜಿ. ತೂಕದ ಕಿಚಡಿ ತಯಾರಿಸುವ ಮೂಲಕ!
ದೆಹಲಿಯಲ್ಲಿ ನಡೆಯುತ್ತಿರುವ ವರ್ಲ್ಡ್ ಫುಡ್ ಇಂಡಿಯಾ ಸಮಾವೇಶದಲ್ಲಿ ಇಷ್ಟೊಂದು ತೂಕದ ಕಿಚಡಿ ತಯಾರಿಸಿದ್ದು, ಇದೀಗ ಗಿನ್ನೆಸ್ ದಾಖಲೆ ನಿರ್ಮಿಸಿದೆ. ಕಪೂರ್ ಅವರ ಈ ಪ್ರಯತ್ನಕ್ಕೆ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್, ಸಾಧ್ವಿ ನಿರಂಜನ್ ಜ್ಯೋತಿ ಮತ್ತು ಯೋಗಗುರು ಬಾಬಾ ರಾಮ್ದೇವ್ ಸಾಥ್ ನೀಡಿದರು. ಒಂದು ರಾತ್ರಿಯಲ್ಲಿ ಸಂಜೀವ್ ಕಪೂರ್ ನೇತೃತ್ವದ 50 ಮಂದಿಯ ತಂಡ ಮತ್ತು ಎನ್ಜಿಒ ಅಕ್ಷಯ ಪಾತ್ರ ಸಹಯೋಗದಲ್ಲಿ ಈ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಸುಮಾರು 1000 ಲೀ. ನೀರು ಹಿಡಿಯಬಹು ದಾದಂಥ 7 ಅಡಿ ಸುತ್ತಳತೆಯ ಬಾಣಲೆಯಲ್ಲಿ ಕಪೂರ್ ಕಿಚಡಿ ತಯಾರಿಸಿದರು. ಬಳಿಕ ಮಾತನಾಡಿದ ಗಿನ್ನೆಸ್ ವಿಶ್ವ ದಾಖಲೆಯ ಪ್ರಾಜೆಕ್ಟ್ ಮ್ಯಾನೇಜರ್ ಪೌಲಿನಾ ಸಪಿನ್ಸ್ಕಾ, “918 ಕೆ.ಜಿ.ಯ ಈ ಕಿಚಡಿಯು ಗಿನ್ನೆಸ್ ದಾಖಲೆಯ ಪುಸ್ತಕಕ್ಕೆ ಸೇರ್ಪಡೆಯಾಗಿದೆ’ ಎಂದು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.