![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 23, 2019, 11:47 AM IST
ಗುವಾಹಟಿ: ಅಸ್ಸಾಂನ ಚಹಾ ತೋಟದ ಕೂಲಿ ಕಾರ್ಮಿಕರು ಕಳ್ಳ ಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 93ಕ್ಕೆ ಏರಿದ್ದು, ಸುಮಾರು 300 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿಯೂ ಕಳ್ಳಭಟ್ಟಿ ಸಾರಾಯಿ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.
ಅಸ್ಸಾಂನ ಗೋಲಾಘಾಟ್ ಮತ್ತು ಜೋಹ್ರಾಟ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕರಣಗಳ ಪ್ರತ್ಯೇಕ ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗೋಲಾಘಾಟ್ ಚಹಾ ತೋಟದಲ್ಲಿ ಕಳ್ಳಭಟ್ಟಿ ಸೇವಿಸಿದ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗುರುವಾರ ರಾತ್ರಿ ಅಸ್ಸಾಂನಲ್ಲಿ ಈ ಘಟನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಕಳ್ಳಭಟ್ಟಿ ಸೇವನೆಯಲ್ಲಿ ಗಂಭೀರವಾಗಿರುವವರಿಗೆ ಚಿಕಿತ್ಸೆ ನೀಡಲು ಸ್ಥಳೀಯ ಜಿಲ್ಲಾಸ್ಪತ್ರೆಗಳಿಂದ ವೈದ್ಯರ ನೆರವು ಪಡೆಯಲಾಗುತ್ತಿದೆ ಎಂದು ವರದಿ ವಿವರಿಸಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.