Aodhya ಪ್ರಧಾನ ಗರ್ಭಗುಡಿಯಲ್ಲಿ ಶ್ಯಾಮಲವರ್ಣದ ಮೂರ್ತಿ
ಕರುನಾಡಿನ ಶಿಲ್ಪಿಗಳ ವಿಗ್ರಹ ಬಹುತೇಕ ಖಚಿತ
Team Udayavani, Jan 7, 2024, 8:10 PM IST
ಲಕ್ನೋ: ಅಯೋಧ್ಯೆಯ ರಾಮಮಂದಿರದ ಮುಖ್ಯ ಗರ್ಭಗುಡಿಯಲ್ಲಿ ಶ್ಯಾಮಲ ವರ್ಣದ, ನಿಂತ ಭಂಗಿಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ರಾಮಲಲ್ಲಾ ಮೂರ್ತಿ ಕುರಿತು ಟ್ರಸ್ಟ್‌ನ ಪದಾಧಿಕಾರಿಯೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿರುವುದು ಇದೇ ಮೊದಲು. ಇವರ ಹೇಳಿಕೆ ಯನ್ನು ಗಮನಿಸಿದರೆ, ಕರ್ನಾಟಕದ ಶಿಲ್ಪಿಗಳಾದ ಅರುಣ್ ಯೋಗಿರಾಜ್ ಮತ್ತು ಗಣೇಶ್ ಭಟ್ ಅವರ ಕೆತ್ತಿರುವ ವಿಗ್ರಹಗಳ ಪೈಕಿ ಒಂದು ವಿಗ್ರಹವನ್ನು ಅಂತಿಮಗೊಳಿ ಸುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಇವರು ಕೆತ್ತಿರುವ ವಿಗ್ರಹಗಳು ಕರ್ನಾಟಕದ ಶ್ಯಾಮಲ ಬಣ್ಣದ ಕಲ್ಲಿನಿಂದ ಕೂಡಿದೆ. ಉಳಿದಂತೆ, ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ ಅವರು ಮಾರ್ಬಲ್(ಅಮೃತಶಿಲೆ) ಬಳಸಿ ವಿಗ್ರಹ ಕೆತ್ತಿದ್ದಾರೆ.
“ರಾಮಲಲ್ಲಾ ಮೂರ್ತಿಯ ವಿಗ್ರಹ ಪಾದಗಳಿಂದ ಹುಬ್ಬುಗಳವರೆಗೆ 51 ಇಂಚು ಇರಲಿದೆ. ಹಾಲು, ಮೊಸರು, ಜೇನುತುಪ್ಪ, ನೀರು..ಹೀಗೆ ಇವುಗಳನ್ನು ಬಳಸಿ ಅಭಿಷೇಕ ಮಾಡಿದರೂ ವಿಗ್ರಹಕ್ಕೆ ಏನೂ ಆಗಲಾರದು. ಆ ರೀತಿಯ ವಿಗ್ರಹವನ್ನು ಆಯ್ಕೆ ಮಾಡಲಾಗಿದೆ. ಡಿ.29ರ ಸಭೆಯಲ್ಲಿ ಟ್ರಸ್ಟ್‌ನ ಎಲ್ಲಾ 11 ಪದಾಧಿಕಾರಿಗಳು ರಾಮಲಲ್ಲಾ ವಿಗ್ರಹ ಆಯ್ಕೆ ಕುರಿತು ತಮ್ಮ ಅಭಿಪ್ರಾಯವನ್ನು ಲಿಖಿತರೂಪದಲ್ಲಿ ಟ್ರಸ್ಟ್‌ನ ಅಧ್ಯಕ್ಷರಿಗೆ ತಿಳಿಸಿದ್ದಾರೆ’ ಎಂದು ಚಂಪತ್ ರಾಯ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.