Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Team Udayavani, Nov 28, 2024, 9:08 AM IST
ರಾಂಚಿ: ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಟುಕನಾಗಿ ಕೆಲಸ ಮಾಡುವ 25 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯನ್ನು ಅರಣ್ಯ ಪ್ರದೇಶದಲ್ಲಿ ಕತ್ತು ಹಿಸುಕಿ ಕೊಂದು ಆಕೆಯ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಪೊಲೀಸರು ಬುಧವಾರ (ನ.28) ತಿಳಿಸಿದ್ದಾರೆ.
ಆರೋಪಿಯನ್ನು ನರೇಶ್ ಭೇಂಗ್ರಾ ಎಂದು ಗುರುತಿಸಲಾಗಿದೆ.
ನವೆಂಬರ್ 24 ರಂದು ಜರಿಯಾಗಢ ಪೊಲೀಸ್ ಠಾಣೆಯ ಜೋರ್ದಾಗ್ ಗ್ರಾಮದ ಬಳಿ ಬೀದಿ ನಾಯಿಯೊಂದು ಮಾನವ ದೇಹದ ಭಾಗಗಳೊಂದಿಗೆ ಪತ್ತೆಯಾದಾಗ ಹತ್ಯೆಯಾದ ಹದಿನೈದು ದಿನಗಳ ನಂತರ ವಿಷಯ ಬೆಳಕಿಗೆ ಬಂದಿದೆ.
ಕಳೆದೆರಡು ವರ್ಷಗಳಿಂದ ತಮಿಳುನಾಡಿನ ಖುಂಟಿ ಜಿಲ್ಲೆಯ 24ರ ಹರೆಯದ ಯುವತಿಯೊಂದಿಗೆ ಭೇಂಗ್ರಾ ಲಿವ್-ಇನ್ ಸಂಬಂಧದಲ್ಲಿದ್ದರು. ಸ್ವಲ್ಪ ಸಮಯದ ಹಿಂದೆ, ಜಾರ್ಖಂಡ್‌ಗೆ ಮರಳಿದ್ದ ಭೇಂಗ್ರಾ ಪ್ರೇಯಸಿಗೆ ವಿಚಾರ ತಿಳಿಸದೆ, ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಿದ್ದ. ಬಳಿಕ ಪತ್ನಿಯನ್ನು ಜಾರ್ಖಂಡ್ ನಲ್ಲಿ ಬಿಟ್ಟು ತಮಿಳುನಾಡಿಗೆ ಮರಳಿದ್ದ.
“ನವೆಂಬರ್ 8 ರಂದು ಖುಂಟಿಯಲ್ಲಿ ಈ ಕ್ರೂರ ಘಟನೆ ಸಂಭವಿಸಿದೆ. ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ ಆರೋಪಿಯು ಪ್ರೇಯಸಿಯನ್ನು ಜರಿಯಾಗಢ್ ಪೊಲೀಸ್ ಠಾಣೆಯ ಜೋರ್ದಾಗ್ ಗ್ರಾಮದ ತನ್ನ ಮನೆಯ ಸಮೀಪವಿರುವ ಕಾಡಿಗೆ ಕರೆದೊಯ್ದು ಕೊಲೆ ಮಾಡಿ ಶವವನ್ನು ಕೊಯ್ದಿದ್ದಾನೆ. ವ್ಯಕ್ತಿಯನ್ನು ಬಂಧಿಸಲಾಗಿದೆ” ಎಂದು ಖುಂಟಿ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
ಭೇಂಗ್ರಾನ ಮದುವೆಯ ಬಗ್ಗೆ ಅರಿಯದ ಮಹಿಳೆ, ಖುಂಟಿಗೆ ಹಿಂತಿರುಗುವಂತೆ ಒತ್ತಡ ಹೇರಿದಳು ಎಂದು ಸಿಂಗ್ ಹೇಳಿದರು. ರಾಂಚಿ ತಲುಪಿದ ನಂತರ, ಅವರು ನವೆಂಬರ್ 24 ರಂದು ರೈಲು ಹತ್ತಿ ಭೇಂಗ್ರಾನ ಹಳ್ಳಿಗೆ ತೆರಳಿದರು.
“ಆರೋಪಿ ಅವಳನ್ನು ತನ್ನ ಮನೆಯ ಸಮೀಪ ಆಟೋರಿಕ್ಷಾದಲ್ಲಿ ಕರೆದೊಯ್ದು ಕಾಯುವಂತೆ ಹೇಳಿ, ಚೂಪಾದ ಆಯುಧಗಳೊಂದಿಗೆ ಹಿಂತಿರುಗಿದನು. ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ನಂತರ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿ ಅಲ್ಲಿಂದ ಹೊರಟು ಹೋಗಿದ್ದಾನೆ. ಬಳಿಕ ಊರಿಗೆ ಹೋಗಿಗೆ ತನ್ನ ಪತ್ನಿಯ ಜತೆ ವಾಸವಾಗಿದ್ದ” ಎಂದು ಸಿಂಗ್ ಹೇಳಿದರು.
ಆದರೆ ಯುವತಿಯು ತಾನು ರೈಲನ್ನು ಹತ್ತಿದ್ದು, ತನ್ನ ಸಂಗಾತಿಯೊಂದಿಗೆ ವಾಸಿಸುವುದಾಗಿ ತನ್ನ ತಾಯಿಗೆ ತಿಳಿಸಿದ್ದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮೃತದೇಹದ ಅಂಗಾಂಗಗಳು ಪತ್ತೆಯಾಗಿದ್ದು, ಕೊಲೆಯಾದ ಮಹಿಳೆಯ ಆಧಾರ್ ಕಾರ್ಡ್ ಸೇರಿದಂತೆ ಸಾಮಾನುಗಳಿದ್ದ ಬ್ಯಾಗ್ ಕೂಡ ಕಾಡಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಾಯಿಯನ್ನು ಸ್ಥಳಕ್ಕೆ ಕರೆಸಿದಾಗ ಅವರು ತಮ್ಮ ಮಗಳ ವಸ್ತುಗಳನ್ನು ಗುರುತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.