ಗ್ಯಾಂಗ್ ವಾರ್ ನಡುವೆ ಮಗಳನ್ನು ಕೋಚಿಂಗ್ ಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯ ಹತ್ಯೆ
Team Udayavani, Dec 4, 2022, 9:29 AM IST
ಜೈಪುರ: ತನ್ನ ಮಗಳನ್ನು ಕೋಚಿಂಗ್ ಸೆಂಟರ್ ಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ನಾಲ್ವರ ತಂಡ ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ನಡೆದಿದೆ.
ಗ್ಯಾಂಗ್ ನ ಭಾಗವೆಂದು ನಂಬಲಾದ ನಾಲ್ವರು ಗುಂಡು ಹಾರಿಸಿದ್ದು ಕುಖ್ಯಾತ ಗ್ಯಾಂಗ್ ಸ್ಟರ್ ಸೇರಿದಂತೆ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾಂಗ್ ಸ್ಟರ್ ರಾಜು ಥೇತ್ ಸಾವನ್ನಪ್ಪಿದ ವ್ಯಕ್ತಿ. ವರದಿಗಳ ಪ್ರಕಾರ, ಸಿಕರ್ ನಗರದ ಪಿಪ್ರಾಲಿ ರಸ್ತೆಯಲ್ಲಿರುವ ಅವರ ಮನೆಯ ಪ್ರವೇಶದ್ವಾರದಲ್ಲಿ ಬೆಳಿಗ್ಗೆ 9.30 ಕ್ಕೆ ನಾಲ್ಕು ಜನರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಕೋರರನ್ನು ಗುರುತಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ರಾಜ್ಯಾದ್ಯಂತ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದ ಮತ್ತೊಬ್ಬ ವ್ಯಕ್ತಿಯನ್ನು ತಾರಾಚಂದ್ ಕಡ್ವಾಸರ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಮಗಳ ಕೋಚಿಂಗ್ ಸೆಂಟರ್ ಗೆ ಸೇರಿಸಲು ಆ ಪ್ರದೇಶಕ್ಕೆ ಹೋಗಿದ್ದರು ಎಂದು ವರದಿಯಾಗಿದೆ. ಗುಂಡಿನ ದಾಳಿಯಲ್ಲಿ ಅವರ ಸೋದರ ಸಂಬಂಧಿ ಕೂಡ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಆಸೀಸ್ ವಿರುದ್ಧ ಗೆದ್ದಅರ್ಜೆಂಟೀನಾ: ಕ್ವಾರ್ಟರ್ ಫೈನಲ್ ಗೆ ಮೆಸ್ಸಿ ಪಡೆ
ಘಟನೆ ನಡೆದ ಸ್ಥಳದಲ್ಲಿ ಹಲವಾರು ಹಾಸ್ಟೆಲ್‌ಗಳು ಮತ್ತು ಕೋಚಿಂಗ್ ಸೆಂಟರ್‌ಗಳಿವೆ. ದರೋಡೆಕೋರ ಥೇತ್ ಅವರ ಸಹೋದರ ಕೂಡ ಅಲ್ಲಿ ಹಾಸ್ಟೆಲ್ ನಡೆಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಅಧಿಕಾರಿಯ ಪ್ರಕಾರ ರಾಜು ಥೇತ್ ರಾಜ್ಯದ ಶೇಖಾವತಿ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ನೊಂದಿಗೆ ವಿರೋಧ ಹೊಂದಿದ್ದನು.
ಕೊಲೆಯಾದ ಕೂಡಲೇ ಇದರ ಹೊಣೆಗಾರಿಕೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನವನೆಂದು ಪರಿಚಯಿಸಿಕೊಂಡ ರೋಹಿತ್ ಗೋಡಾರಾ ಎಂಬ ವ್ಯಕ್ತಿ ಫೇಸ್ ಬುಕ್ ನಲ್ಲಿ ಹೊತ್ತುಕೊಂಡಿದ್ದಾನೆ. ಥೇತ್ ನ ಹತ್ಯೆಯು ಆನಂದಪಾಲ್ ಸಿಂಗ್ ಮತ್ತು ಬಲ್ಬೀರ್ ಬಾನುಡಾಗೆ ಪ್ರತೀಕಾರ ಎಂದು ಹೇಳಿದರು.
ಆನಂದ್ ಪಾಲ್ ಗ್ಯಾಂಗ್ ನ ಸದಸ್ಯನಾಗಿದ್ದ ಗ್ಯಾಂಗ್ ಸ್ಟರ್ ಬಾನುಡಾ ಜುಲೈ 2014 ರಲ್ಲಿ ಬಿಕಾನೇರ್ ಜೈಲಿನಲ್ಲಿ ನಡೆದ ಗ್ಯಾಂಗ್ ವಾರ್ ನಲ್ಲಿ ಕೊಲ್ಲಲ್ಪಟ್ಟಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.