ನೋಡು ನೋಡುತ್ತಲೆ ಕುಸಿದು ಬಿದ್ದ ಬ್ರಿಡ್ಜ್ : ವಿಡಿಯೋ ಇಲ್ಲಿದೆ ನೋಡಿ
Team Udayavani, Aug 27, 2021, 7:19 PM IST
ಉತ್ತಾರಾಖಂಡ : ಡೆಹ್ರಾಡೂನ್-ರಿಷಿಕೇಶ್ ರಸ್ತೆಯ ರಾಣಿ ಪೋಖರಿಯಲ್ಲಿ ಜಖಾನ್ ನದಿಯ ಮೇಲಿನ ಸೇತುವೆಯ ಒಂದು ಭಾಗವು ಭಾರೀ ಮಳೆ ಮತ್ತು ಬಲವಾದ ಪ್ರವಾಹದಿಂದಾಗಿ ಕುಸಿದಿದೆ. ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿರುವ ಸೇತುವೆ ಕುಸಿತದ ವಿಡಿಯೋ ವೈರಲ್ ಆಗುತ್ತಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆ ಕೆಲವೊಂದು ಅನಾಹುತಗಳನ್ನು ಸೃಷ್ಠಿಸಿದೆ. ಮಳೆಯಿಂದಾಗಿ ಹಲವೆಡೆ ಭೂಕುಸಿತವುಂಟಾಗಿದ್ದು ಹೃಷಿಕೇಶ್-ದೇವಪ್ರಯಾಗ್, ಹೃಷಿಕೇಶ್-ತೆಹ್ರಿ ಮತ್ತು ಡೆಹ್ರಾಡೂನ್-ಮಸ್ಸೂರಿ ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಉತ್ತರಾಖಂಡ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹವಾಮಾನ ಸಹಜ ಸ್ಥಿತಿಗೆ ಬರುವವರೆಗೆ ಈ ಪ್ರದೇಶಗಳಲ್ಲಿ ಓಡಾಡುವುದು ಬೇಡ ಎಂದು ಪೊಲೀಸರು ಪ್ರಯಾಣಿಕರಿಗೆ ಸೂಚಿಸಿದ್ದಾರೆ.
#WATCH | Uttarakhand: A portion of a bridge over the Jakhan river on Dehradun-Rishikesh highway in Ranipokhari collapses. pic.twitter.com/x9rjWoibA0
— ANI (@ANI) August 27, 2021
ಮಾಲ್ದೇವತಾ-ಸಹಸ್ರಧಾರ ಲಿಂಕ್ ರಸ್ತೆಯು ಡೆಹ್ರಾಡೂನ್ ನಲ್ಲಿ ನಿರಂತರ ಮಳೆಯಿಂದಾಗಿ ಜಲಾವೃತವಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಉತ್ತರಾಖಂಡದಲ್ಲಿ ಆಗಸ್ಟ್ 29 ರವರೆಗೆ ಭಾರೀ ಮಳೆ ಮುಂದುವರಿಯುವ ಸೂಚನೆಯನ್ನು ನೀಡಿದೆ.
#WATCH | A bridge at Jakhan river on Ranipokhari-Rishikesh highway collapses in Dehradun, Uttarakhand
District Magistrate R Rajesh Kumar says traffic on the route has been halted. pic.twitter.com/0VyccMrUky
— ANI (@ANI) August 27, 2021
ಇನ್ನು ಬುಧವಾರದಂದು ಉತ್ತರಾಖಂಡದ ಪೌರಿ ಜಿಲ್ಲೆಯ ಲಾನ್ಸ್‌ಡೌನ್ ಮತ್ತು ಜೈಹರಿಕಾಲ್ ನಡುವೆ ಕಾರು ಆಳವಾದ ಕಮರಿಗೆ ಬಿದ್ದು ದೆಹಲಿಯ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಪಿಟಿಐ ವರದಿ ಪ್ರಕಾರ, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.