ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ!: ವಿಶ್ವ ಬ್ಯಾಂಕ್ ಎಚ್ಚರಿಕೆ
Team Udayavani, Sep 16, 2022, 7:30 PM IST
ನವದೆಹಲಿ: ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್ ಮುಖ್ಯಸ್ಥ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ. ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್ ಕಳವಳ ವ್ಯಕ್ತಪಡಿಸಿದೆ.
ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್ ಮಾಲ್ಪಾಸ್ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.
34.5 ಕೋಟಿ ಜನ ಉಪವಾಸದತ್ತ:
ರಷ್ಯಾ-ಉಕ್ರೇನ್ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.