ಆಧಾರ್ ಡೇಟಾ ಕದ್ದ ಆಂಧ್ರ ಸಂಸ್ಥೆ
Team Udayavani, Apr 15, 2019, 6:08 AM IST
ಹೈದರಾಬಾದ್: ಆಂಧ್ರದ ತೆಲುಗು ದೇಸಂ ಪಕ್ಷಕ್ಕೆ ಆ್ಯಪ್ ಅಭಿವೃದ್ಧಿಪಡಿಸಿದ ಐಟಿ ಗ್ರಿಡ್ಸ್ ಎಂಬ ಸಂಸ್ಥೆ ಬಳಿ 7.8 ಕೋಟಿ ಆಧಾರ್ ದತ್ತಾಂಶ ಇದೆ ಎಂಬುದು ತಿಳಿದುಬಂದಿದ್ದು, ಈ ಸಂಬಂಧ ಹೈದರಾಬಾದ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಜನರ ಆಧಾರ್ ದತ್ತಾಂಶವನ್ನು ಈ ಸಂಸ್ಥೆ ಹಾರ್ಡ್ಡಿಸ್ಕ್ ನಲ್ಲಿ ಸಂಗ್ರಹಿಸಿದ್ದು, ಇದು ಆಧಾರ್ ಕಾಯ್ದೆಯ ಉಲ್ಲಂಘನೆಯಾಗಿದೆ. ಈ ದತ್ತಾಂಶವನ್ನು ಸಂಸ್ಥೆಯು ಅಕ್ರಮವಾಗಿ ಕೇಂದ್ರ ಸರ್ವರ್ ಅಥವಾ ರಾಜ್ಯ ಸರ್ವರ್ನಿಂದ ಪಡೆದಿರಬಹುದು. ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಕೆಲವೇ ದಿನಗಳ ಹಿಂದೆ ತೆಲಂಗಾಣ ಅಧಿಕಾರಿಗಳು ಐಟಿ ಗ್ರಿಡ್ಸ್ ಸಂಸ್ಥೆಯ ಕಚೇರಿಯಿಂದ ಹಾರ್ಡ್ ಡಿಸ್ಕ್ ವಶಪಡಿಸಿಕೊಂಡಿದ್ದರು. ಈ ಹಾರ್ಡ್ಡಿಸ್ಕ್ ಪರಿಶೀಲಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.