ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಆಮ್ ಆದ್ಮಿ
Team Udayavani, Feb 22, 2020, 5:49 PM IST
ಮುಂಬಯಿ: ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷವು ಮಹಾರಾಷ್ಟ್ರದಲ್ಲಿ ಚುನಾವಣೆ ಸ್ಪರ್ಧೆಗಳಿಯಲು ನಿರ್ಧರಿಸಿದೆ.
ಮುಂಬರುವ ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಸ್ಪರ್ಧಿಸಲು ನಿರ್ಧರಿಸಿದೆ. ಇದರಿಂದ ಆಮ್ ಆದ್ಮಿ ಪಕ್ಷಕ್ಕೆ ಮುಂಬಯಿ ಮನಪಾ ಚುನಾವಣೆಯಲ್ಲಿ ಯಾವ ರೀತಿಯ ಪ್ರತಿಕ್ರಿಯೆ ದೊರೆಯುತ್ತದೆ ಎಂಬುದರ ಬಗ್ಗೆ ಇಡಿ ದೇಶವು ಹೆಚ್ಚು ಗಮನ ಹರಿಸುತ್ತಿದೆ.
ದಿಲ್ಲಿಯಲ್ಲಿ ಭರ್ಜರಿ ಗೆಲುವಿನ ನಂತರ, ಮಹಾರಾಷ್ಟ್ರ ಸೇರಿದಂತೆ ದೇಶದಾದ್ಯಂತ ಪಕ್ಷವನ್ನು ವಿಸ್ತರಿಸುವ ನಿರ್ಣಯ ಆಮ್ ಆದ್ಮಿ ತೆಗೆದುಕೊಂಡಿದೆ. ಆದ್ದರಿಂದ ಮುಂಬಯಿ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಟ್ರದ ಇತರ ಭಾಗಗಳ ಮನಪಾ ಚುನಾವಣೆಯಲ್ಲಿ ಸ್ಪರ್ಧಿಸುವಲ್ಲಿ ಪಕ್ಷವು ಗಮನಹರಿಸುತ್ತಿದ್ದೇವೆ ಎಂದು ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ. ಮುಂಬಯಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ನಾವು ಯಾರ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮುಂಬಯಿ ಹಾಗೂ ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.
ಪಕ್ಷವು ಯಾವುದೇ ನಿರ್ಧಾರವನ್ನು ಆತುರದಲ್ಲಿ ಮಾಡುವುದಿಲ್ಲ. 2014ರ ನಾವು ತುಂಬಾ ಆತುರ ಮಾಡಿದ್ದೇವೆ. ಆ ವೇಳೆ ಆಮ್ ಆದ್ಮಿ ಪಕ್ಷ 430 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಇದರಲ್ಲಿ 409 ಅಭ್ಯರ್ಥಿಗಳ ಠೇವಣಿಗಳು ರದ್ದಾಗಿತ್ತು. ಆದ್ದರಿಂದ, ಪ್ರಸಕ್ತ ಆಮ್ ಆದ್ಮಿ ಪಕ್ಷವು ಪರ್ಯಾಯವಾಗಿ ನಿಂತಿದೆ, ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸಲಾಗುವುದು ಎಂದು ಹೇಳಿದರು. ಈ ಆಯ್ಕೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಸಾರ್ವಜನಿಕರು ನಿರ್ಧರಿಸಬೇಕು. ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಜನರನ್ನು ತೊಡಗಿಸಿಕೊಳ್ಳಲು ಅಭಿಯಾನವನ್ನು ಪ್ರಾರಂಭಿಸಲಾಗುವುದು. ಈ ಅಭಿಯಾನದ ಅಡಿಯಲ್ಲಿ 5 ದಿನಗಳಲ್ಲಿ 13 ಲಕ್ಷ ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.
ಠಾಕ್ರೆ ಸರಕಾರಕ್ಕೆ ಸಲಹೆ ನೀಡುವೆ
ದಿಲ್ಲಿಯಲ್ಲಿ ಆಮ್‌ಆದ್ಮಿ ಪಕ್ಷವು 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಿದೆ. ದಿಲ್ಲಿ ಸರಕಾರವು ಹೇಗೆ ಈ ಕಾರ್ಯ ನಿಭಾಯಿಸಿದೆ ಎಂಬುದರ ಕುರಿತು ಉದ್ಧವ್ ಠಾಕ್ರೆ ಅವರ ಸರಕಾರಕ್ಕೆ ಸಲಹೆ ಕೇಳಿದರೆ ನಾವು ಅವರಿಗೆ ಸಹಾಯ ಮಾಡಲು ಸಿದ್ಧರಿದ್ದೇವೆ, ಎಂದು ಸಂಸದ ಸಂಜಯ್ ಸಿಂಗ್ ಅವರು ಹೇಳಿದರು. ಇಷ್ಟು ದೊಡ್ಡ ರಾಜ್ಯದಲ್ಲಿ ಹೆಚ್ಚಿನ ಸಂಪನ್ಮೂಲಗಳನ್ನು ಹೊಂದಿದೆ. ಆದ್ದರಿಂದ ಮಹಾವಿಕಾಸ್ ಆಘಾಡಿಯ ಸರಕಾರವು ಜನರಿಗೆ ಉಚಿತ ವಿದ್ಯುತ್ ಒದಗಿಸಲು ಸಾಧ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.