AAP; ಹರಿಯಾಣದಲ್ಲಿ ಪಂಚ ಗ್ಯಾರಂಟಿ ಘೋಷಣೆ: ಸುನೀತಾ ಕೇಜ್ರಿವಾಲ್ ಪ್ರಚಾರ ಸಾರಥ್ಯ

ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿ ಹೋರಾಟ...

Team Udayavani, Jul 20, 2024, 6:28 PM IST

1-AAP-1

ಪಂಚಕುಲ: ಹರಿಯಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಆರಂಭವಾಗಿದ್ದು ಆಮ್ ಆದ್ಮಿ ಪಕ್ಷ ( AAP) ಗ್ಯಾರಂಟಿಗಳನ್ನು ಶನಿವಾರ ಪ್ರಕಟಿಸಿದೆ.

ಪಕ್ಷದ ಸಂಸ್ಥಾಪಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ ಪತ್ನಿ ಪ್ರಚಾರ ಆರಂಭಿಸಿ ಪಂಚ ಗ್ಯಾರಂಟಿಗಳನ್ನು ಪಕ್ಷದ ಪ್ರಮುಖ ನಾಯಕರೊಂದಿಗೆ ಘೋಷಣೆ ಮಾಡಿ ಆಡಳಿತಾರೂಢ ಬಿಜೆಪಿಗೆ 1 ಸ್ಥಾನವೂ ಬರಬಾರದು ಎಂದು ಗುಡುಗಿದ್ದಾರೆ. ಆಪ್ ಇಂಡಿಯಾ ಮೈತ್ರಿಕೂಟದಲ್ಲಿದ್ದರೂ ಹರಿಯಾಣದಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಎಲ್ಲ 90 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ.

ಆಪ್ ನ 5 ಗ್ಯಾರಂಟಿಗಳು: 24 ಗಂಟೆಗಳ ಉಚಿತ ವಿದ್ಯುತ್, ಉಚಿತ ಚಿಕಿತ್ಸೆ, ಉಚಿತ ಶಿಕ್ಷಣ, ಎಲ್ಲ ಮಹಿಳೆಯರಿಗೆ ತಿಂಗಳಿಗೆ 1,000 ರೂ, ಪ್ರತಿ ಯುವಕನಿಗೆ ಉದ್ಯೋಗವನ್ನು ಒದಗಿಸುವ ಭರವಸೆಗಳನ್ನು ನೀಡಿದೆ.

ಸುನೀತಾ ಕೇಜ್ರಿವಾಲ್ ಮಾತನಾಡಿ ”ಅರವಿಂದ್ ಕೇಜ್ರಿವಾಲ್ ದೇಶದ ರಾಜಧಾನಿಯನ್ನು ಆಳುತ್ತಾರೆ ಎಂದು ಯಾರೂ ಕನಸಿನಲ್ಲಿಯೂ ಊಹಿಸಿರಲಿಲ್ಲ. ಇದು ಸಣ್ಣ ವಿಷಯವಲ್ಲ, ಇದು ಪವಾಡಕ್ಕಿಂತ ಕಡಿಮೆಯಲ್ಲ. ನನಗೆ ಅನಿಸುತ್ತದೆ. ಅವರು ಏನನ್ನಾದರೂ ಮಾಡಬೇಕೆಂದು ದೇವರು ಖಂಡಿತವಾಗಿಯೂ ಬಯಸುತ್ತಿದ್ದಾನೆ”ಎಂದರು.

ಪಂಜಾಬ್ ಸಿಎಂ ಭಗವಂತ್ ಮಾನ್ ಮಾತನಾಡಿ ‘ನಾವು ರಾಜಕೀಯವನ್ನು ವ್ಯಾಪಾರ ಎಂದು ಪರಿಗಣಿಸುವುದಿಲ್ಲ.ಇದು ಕೇವಲ ವೃತ್ತಿಯಲ್ಲ ಆದರೆ ನಮಗೆ ಉತ್ಸಾಹವಾಗಿದೆ. ಪ್ರತಿಪಕ್ಷಗಳು ಒಳ್ಳೆಯವರಾಗಿದ್ದರೆ, ನಾವು ಪಕ್ಷವನ್ನು ರಚಿಸಬೇಕಾಗಿರಲ್ಲ. ಅವರು ನಮಗೆ ಸವಾಲೆಸೆದರು.ಹರಿಯಾಣದ ಜನರು ಪ್ರತಿ ಪಕ್ಷಕ್ಕೂ ಸಮಯ ಮತ್ತು ಅವಕಾಶವನ್ನು ನೀಡಿದರು, ಆದರೆ ಯಾವುದೂ ಒಳ್ಳೆಯದನ್ನು ಮಾಡಿಲ್ಲ’ ಎಂದರು.

2019 ರಲ್ಲಿ 40 ಸ್ಥಾನ ಗೆದ್ದ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತಾದರೂ ಸ್ಪಷ್ಟ ಬಹುಮತ ಪಡೆದಿರಲಿಲ್ಲ. ಜನನಾಯಕ ಜನತಾ ಪಕ್ಷ ಮತ್ತು ಏಳು ಸ್ವತಂತ್ರ ಶಾಸಕರೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿ ಸರ್ಕಾರವನ್ನು ರಚಿಸಿತ್ತು. ಕಾಂಗ್ರೆಸ್ 31 ಸ್ಥಾನಗಳನ್ನು ಗೆದ್ದಿಕೊಂಡಿತ್ತು. ಆಪ್ 2019 ರ ವಿಧಾನಸಭಾ ಚುನಾವಣೆಯಲ್ಲಿ 46 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ರಾಜ್ಯದೆಲ್ಲೆಡೆ ಒಟ್ಟು 59,839 ಮತಗಳನ್ನು ಮಾತ್ರ ಪಡೆದಿತ್ತು. ಈಗ ಸಂಘಟನೆಯನ್ನು ಬಲಪಡಿಸಿಕೊಂಡಿದೆ.

ಲೋಕ ಸಮರದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ

ಆಪ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಕಾಂಗ್ರೆಸ್ 9 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿ ಐದು ಸ್ಥಾನಗಳನ್ನು ಗೆದ್ದಿತ್ತು. ಆಪ್ ಕುರುಕ್ಷೇತ್ರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಪ್ರಬಲ ಸ್ಪರ್ಧೆ ನೀಡಿತ್ತಾದರೂ ಗೆಲ್ಲಲಿಲ್ಲ. ಕುರುಕ್ಷೇತ್ರ ಕ್ಷೇತ್ರದಿಂದ ಶೀಲ್ ಗುಪ್ತಾ ಅವರು 29 ಸಾವಿರ ಮತಗಳಿಂದ ಬಿಜೆಪಿಯ ನವೀನ್ ಜಿಂದಾಲ್ ವಿರುದ್ಧ ಸೋಲು ಅನುಭವಿಸಿದ್ದರು. ಬಿಜೆಪಿ ಸಿಎಂ ನಯಬ್ ಸಿಂಗ್ ಸೈನಿ ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸುವ ಸಾಧ್ಯತೆ ಹೆಚ್ಚಾಗಿದೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.