ದಿಲ್ಲಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ನಡೆಯುತ್ತಿಲ್ಲ: ಆಪ್
Team Udayavani, Mar 11, 2019, 11:52 AM IST
ಹೊಸದಿಲ್ಲಿ : ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಮಾತುಕತೆ ನಡೆಯುತ್ತಿಲ್ಲ; ಆದುದರಿಂದ ಆಮ್ ಆದ್ಮಿ ಪಕ್ಷ ದಿಲ್ಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದೆ ಎಂದು ಆಪ್ ನಾಯಕ ಗೋಪಾಲ್ ರಾಯ್ ಹೇಳಿದ್ದಾರೆ.
ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಂದು ಪಕ್ಷದ ಎಲ್ಲ ಶಾಸಕರು ಮತ್ತು ಎಲ್ಲ ರಾಜ್ಯ ಘಟಕಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡಸಿ ಲೋಕಸಭಾ ಚುನಾವಣೆಗಳ ರಣತಂತ್ರವನ್ನು ಚರ್ಚಿಸಲಿದ್ದಾರೆ ಎಂದು ರಾಯ್ ಸುದ್ದಿಗಾರರಿಗೆ ಹೇಳಿದರು.
ಕಳೆದ ವಾರ ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಶೀಲಾ ದೀಕ್ಷಿತ್ ಅವರು ದಿಲ್ಲಿಯಲ್ಲಿ ಆಪ್ ಜತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ; ಲೋಕಸಭಾ ಚುನಾವಣೆಗಳನ್ನು ದಿಲ್ಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.