ಉತ್ತರಾಖಂಡದ 70 ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ: ಕೇಜ್ರಿವಾಲ್
Team Udayavani, Aug 21, 2020, 12:59 AM IST
ಹೊಸದಿಲ್ಲಿ: ಉತ್ತರಾಖಂಡ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ರಾಜ್ಯದ 70 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈ ಕುರಿತು ಗುರುವಾರ ಪ್ರತಿಕ್ರಿಯಿಸಿರುವ ಅವರು, ಉತ್ತರಾಖಂಡದಲ್ಲಿ ಚುನಾವಣೆ ಎದುರಿಸುವ ಕುರಿತು ಯಾವುದೇ ಸ್ಪಷ್ಟತೆ ಇರಲಿಲ್ಲ. ಈ ಬಗ್ಗೆ ರಾಜ್ಯದಲ್ಲಿ ಸಮೀಕ್ಷೆ ನಡೆಸಿದಾಗ ಶೇ.60ರಷ್ಟು ಮಂದಿ ಈ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ಎಎಪಿ ಕಣಕ್ಕಿಳಿಯುವ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯ, ಮೂಲಸೌಲಭ್ಯಗಳು ಚುನಾವಣ ವಿಷಯಗಳಾಗಿವೆ ಎಂದು ಹೇಳಿದ್ದಾರೆ. ಪಂಜಾಬ್ ಹಾಗೂ ಗೋವಾ ವಿಧಾನಸಭಾ ಚುನಾವಣೆಯಲ್ಲೂ ಕೂಡ ಆಮ್ ಆದ್ಮಿ ಪಾರ್ಟಿ ಸ್ಪರ್ಧಿಸಲು ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.