Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
ಸಿಎಂ ಮನೆ ಎದುರು ಬಿಜೆಪಿ ಪ್ರತಿಭಟನೆ, ಪಿಎಂ ಮನೆ ಎದುರು ಆಪ್ ಪ್ರೊಟೆಸ್ಟ್
Team Udayavani, Jan 8, 2025, 9:23 PM IST
ನವದೆಹಲಿ: ದೆಹಲಿ ಮುಖ್ಯಮಂತ್ರಿ ನಿವಾಸದ ನವೀಕರಣ ವಿಷಯಕ್ಕೆ ಸಂಬಂಧಿಸಿದಂತೆ ಆಪ್ ಮತ್ತು ಬಿಜೆಪಿ ನಡುವೆ ಬುಧವಾರ ಜಟಾಪಟಿ ನಡೆದಿದೆ. ಬಿಜೆಪಿಯ “ಶೀಶ್ ಮಹಲ್’ ಆರೋಪಕ್ಕೆ ತಿರುಗೇಟು ನೀಡಿರುವ ಆಪ್, ಪ್ರಧಾನಿ ನಿವಾಸವನ್ನು “ರಾಜ್ ಮಹಲ್’ ಎಂದು ಕರೆದಿದ್ದು, ಇದರ ನಿರ್ಮಾಣಕ್ಕೆ 2700 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದೆ.
ಶೀಶ್ ಮಹಲ್ ಆರೋಪಗಳು ಸುಳ್ಳು ಎಂದು ಸಾಬೀತು ಪಡಿಸಲು ಸಚಿವ ಸೌರಭ್ ಭಾರದ್ವಾಜ್ ಮತ್ತು ಸಂಸದ ಸಂಜಯ ಸಿಂಗ್ ವಿಡಿಯೋಗ್ರಾಫರ್‌ಗಳ ಜತೆಗೆ ಫ್ಲ್ಯಾಗ್‌ಶಿಪ್ ರಸ್ತೆಯಲ್ಲಿರುವ ಮನೆಯನ್ನು ಪ್ರವೇಶಿಸಲು ಮುಂದಾದರು. ಆದರೆ ಪೊಲೀಸರು ಇದಕ್ಕೆ ಅಡ್ಡಿಪಡಿಸಿದ ಕಾರಣ, ಕೆಲ ಕಾಲ ಪ್ರತಿಭಟನೆ ನಡೆಸಿ, ಪ್ರಧಾನಿ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಿದರು. ಆದರೆ ದಾರಿಯಲ್ಲೇ ಅವರನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಪ್ ನಾಯಕರು ಹಿಂದಿರುಗಿದರು.
ಬಿಜೆಪಿ ಪ್ರತಿಭಟನೆ:
ಮತ್ತೂಂದಡೆ ಆಪ್ ನಡೆಸಿರುವ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ನಾಯಕರು ಮಥುರಾ ರಸ್ತೆಯಲ್ಲಿರುವ, ಆತಿಷಿ ಅವರಿಗೆ ಹಂಚಿಕೆ ಮಾಡಿರುವ ಮನೆಯತ್ತ ತೆರಳಿ ಪ್ರತಿಭಟನೆ ನಡೆಸಿದರು. ಇವರೂ ಸಹ ವಿಡಿಯೋಗ್ರಾಫರ್‌ಗಳನ್ನು ಕರೆದೊಯ್ದಿದ್ದರು. ಆತಿಷಿ ಅವರಿಗೆ ಈಗಾಗಲೇ ಮನೆ ನೀಡಲಾಗಿದೆ ಎಂಬುದನ್ನು ಜನರಿಗೆ ತೋರಿಸುವುದು ಅವರ ಉದ್ದೇಶವಾಗಿತ್ತು. ಆತಿಷಿ ಅವರಿಗೆ ಮನೆ ನೀಡಿದ್ದರೂ ಸಹ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.
ಶೀಶ್ ಮಹಲ್ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ
ಅರವಿಂದ ಕೇಜ್ರಿವಾಲ್ ಸಿಎಂ ಆಗಿದ್ದಾಗ ಅವರು 40 ಕೋಟಿ ರೂ. ಖರ್ಚು ಮಾಡಿ ನವೀಕರಣ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ “ಶೀಶ್‌ಮಹಲ್’ಗೆ ಸಂಬಂಧಿಸಿದ ವಿಡಿಯೋವೊಂದನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ. ಈ ನಿವಾಸದಲ್ಲಿ 5 ಕೋಟಿ ಬೆಲೆ ಬಾಳುವ ಕರ್ಟನ್, 1 ಕೋಟಿ ರೂ. ಬೆಲೆ ಬಾಳುವ ರೇಲಿಂಗ್ಸ್, 70 ಲಕ್ಷ ರೂ.ನ ಸ್ವಯಂಚಾಲಿತ ಬಾಗಿಲು, 65 ಲಕ್ಷ ರೂ. ಟೀವಿ, 9 ಲಕ್ಷ ರೂ.ನ ಫ್ರಿಡ್ಜ್ ಸೇರಿ ಹಲವು ಐಶಾರಾಮಿ ವಸ್ತುಗಳಿವೆ ಎಂದು ಹೇಳಿದೆ.
ಇದನ್ನೂ ಓದಿ: Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.