ಆರುಷಿಯನ್ನು ಕೊಂದದ್ದು ಹೆತ್ತವರಲ್ಲ: ಹೈಕೋರ್ಟ್‌ ತೀರ್ಪು

Team Udayavani, Oct 12, 2017, 3:23 PM IST

Aarushi Parents-700.jpg

ಹೊಸದಿಲ್ಲಿ : ‘ನೂಪುರ್‌ ಮತ್ತು ರಾಜೇಶ್‌ ತಲ್ವಾರ್‌ ಅವರು ತಮ್ಮ 14ರ ಹರೆಯದ ಪುತ್ರಿ ಆರುಷಿಯನ್ನು ಕೊಂದಿಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್‌ ಇಂದು ಗುರುವಾರ ಮಹತ್ವದ ತೀರ್ಪನ್ನು ನೀಡಿದೆ.

ಅಂತೆಯೇ ಆರುಷಿ ಮತ್ತು ಮನೆ ಕೆಲಸದಾಳು ಹೇಮರಾಜ್‌ ಅವಳಿ ಕೊಲೆ ಪ್ರಕರಣದಲ್ಲಿ ರಾಜೇಶ್‌ ಮತ್ತು ನೂಪುರ್‌ ತಲ್ವಾರ್‌ ದಂಪತಿಯನ್ನು ಹೈಕೋರ್ಟ್‌ ಖುಲಾಸೆಗೊಳಿಸಿದೆ. 

‘ತಲ್ವಾರ್‌ ದಂಪತಿಗೆ ಸಂದೇಹದ ಲಾಭವನ್ನು ಕೊಡಬೇಕಾಗುತ್ತದೆ. ಏಕೆಂದರೆ ಕೇವಲ ಶಂಕೆಯ ಮೇಲೆ ಹೆತ್ತವರನ್ನು ಕೊಲೆ ಅಪರಾಧಿಗಳೆಂದು ತೀರ್ಮಾನಿಸುವಂತಿಲ್ಲ’ ಎಂದು ಹೈಕೋರ್ಟ್‌ ಹೇಳಿತು.

ತೀರ್ಪನ್ನು ಆಲಿಸಿದ ಬಳಿಕ ಪ್ರತಿಕ್ರಿಯಿಸಿದ ಆರುಷಿಯ ಅಜ್ಜ, “ನಾವು ಈ ತೀರ್ಪಿಗಾಗಿ ನ್ಯಾಯಾಲಯಕ್ಕೆ ಆಭಾರಿಯಾಗಿದ್ದೇವೆ; ಆರುಷಿಯ ಹೆತ್ತವರು ಅಮಾಯಕರೆಂದು ನಾವು ಮೊದಲಿನಿಂದಲೂ ತಿಳಿದಿದ್ದೆವು; ಕೋರ್ಟ್‌ ಈಗ ಅದೇ ಅಭಿಪ್ರಾಯವನ್ನು ತಳೆದು ತೀರ್ಪು ನೀಡಿದೆ” ಎಂದು ಹೇಳಿದರು.

‘ತಮ್ಮ ಮಗಳಾಗಿರುವ ಆರುಷಿಯನ್ನು ಆಕೆಯ ಹೆತ್ತವರಾದ ತಲ್ವಾರ್‌ ದಂಪತಿಯೇ ಕೊಂದದ್ದೆಂದು ನಿಸ್ಸಂಶಯವಾಗಿ ಸಾಬೀತು ಪಡಿಸುವಲ್ಲಿ ಸಿಬಿಐ ವಿಫ‌ಲವಾಗಿದೆ; ಅಂತೆಯೇ ತಲ್ವಾರ್‌ ದಂಪತಿಗೆ ಸಂದೇಹದ ಲಾಭವನ್ನು ಕೊಡಬೇಕಾಗುತ್ತದೆ’ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿತು. 

ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ 14 ವರ್ಷ ಪ್ರಾಯದ ಆರುಷಿ ತಲ್ವಾರ್‌ ಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್‌ ಹೈಕೋರ್ಟ್‌ ಇಂದು ಗುರುವಾರ ತೀರ್ಪು ನೀಡಿತು. 2008ರಲ್ಲಿ ನೋಯ್ಡಾದಲ್ಲಿನ ತನ್ನ ನಿವಾಸದಲ್ಲಿ ಆರುಷಿ ಸತ್ತು ಬಿದ್ದಿರುವುದು ಪತ್ತೆಯಾಗಿತ್ತು. 

ಆರುಷಿ ಮತ್ತು ಮನೆ ಕೆಲಸದಾಳು ಹೇಮರಾಜ್‌ನನ್ನು ಹತ್ಯೆಗೈದ ಅಪರಾಧಕ್ಕಾಗಿ ಉತ್ತರ ಪ್ರದೇಶ ನ್ಯಾಯಾಲಯ ಆರುಷಿಯ ಹೆತ್ತವರಾದ ರಾಜೇಶ್‌ ಮತ್ತು ನೂಪುರ್‌ ತಲ್ವಾರ್‌ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.

ಗಾಜಿಯಾಬಾದ್‌ನ ಸಿಬಿಐ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ಆರುಷಿ ಹೆತ್ತವರು ಅಲಹಾಬಾದ್‌ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಸೆಪ್ಟಂಬರ್‌ನಲ್ಲಿ  ಜಸ್ಟಿಸ್‌ ಬಿ ಕೆ ನಾರಾಯಣ ಮತ್ತು ಜಸ್ಟಿಸ್‌ ಎ ಕೆ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಪ್ರಕರಣದ ಮೇಲಿನ ತೀರ್ಪನ್ನು ಕಾದಿರಿಸಿತ್ತು. 

ಟಾಪ್ ನ್ಯೂಸ್

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.