“ಆರುಷಿ ಕೇಸ್‌ನಲ್ಲಿ ಜಡ್ಜ್ “ಚಿತ್ರ ನಿರ್ದೇಶಕ’ರಂತೆ ವರ್ತಿಸಿದರು’
Team Udayavani, Oct 14, 2017, 11:42 AM IST
ಅಲಹಾಬಾದ್: ಆರುಷಿ ತಲ್ವಾರ್ ಹತ್ಯೆ ಪ್ರಕರಣದ ತೀರ್ಪು ನೀಡುವಾಗ ವಿಚಾರಣಾ ನ್ಯಾಯಾಲಯದ ಜಡ್ಜ್ ಒಂದು ಕಾಲ್ಪನಿಕ ಸನ್ನಿವೇಶವನ್ನು ಸೃಷ್ಟಿಸುವಂಥ ಸಿನಿಮಾ ನಿರ್ದೇಶಕರಂತೆ ವರ್ತಿಸಿದ್ದಾರೆ. ದಾರಿ ತಪ್ಪಿಸುವ ದೃಷ್ಟಾಂತಗಳನ್ನು ಬಳಸಿಕೊಳ್ಳುವ ಮೂಲಕ ಕಾನೂನಿನ ಮೂಲ ಮೌಲ್ಯವನ್ನೇ ಗಾಳಿಗೆ ತೂರಿದ್ದಾರೆ.’ ಇದು ರಾಜೇಶ್ ಹಾಗೂ ನೂಪುರ್ ತಲ್ವಾರ್ ನಿರ್ದೋಷಿಗಳು ಎಂದು ತೀರ್ಪು ನೀಡುವ ವೇಳೆ ಅಲಹಾಬಾದ್ ಹೈಕೋರ್ಟ್‌ನ ನ್ಯಾ. ಬಿ.ಕೆ.ನಾರಾಯಣ ಹಾಗೂ ಎ.ಕೆ.ಮಿಶ್ರಾ ಅವರು ಆಡಿರುವ ಮಾತುಗಳು.
ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯವು ಮಾಡಿರುವ ಲೋಪಗಳು, ಇಟ್ಟ ತಪ್ಪು ಹೆಜ್ಜೆಗಳನ್ನು ಒಂದೊಂದಾಗಿಯೇ ಹೈಕೋರ್ಟ್ ಬಿಡಿಸಿಟ್ಟಿತು. “ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ವೇಳೆ ನ್ಯಾಯಸಮ್ಮತ ಹಾಗೂ
ಪಾರದರ್ಶಕವಾಗಿರಬೇಕು. ಅವರು ಚಿತ್ರ ನಿರ್ದೇಶಕರಂತೆ ವರ್ತಿಸಬಾರದು. ಇಲ್ಲದಿದ್ದರೆ ಎಲ್ಲ ಪ್ರಕ್ರಿಯೆಯೂ ಕಾನೂನಿನ ಅಪಹಾಸ್ಯದಂತಾಗುತ್ತದೆ’ ಎಂದು ಪೀಠ ಹೇಳಿದೆ. ಇದೇ ವೇಳೆ, ಆದೇಶದ ಪ್ರತಿ ಜೈಲು ಅಧಿಕಾರಿಗಳ ಕೈಸೇರದ ಕಾರಣ, ಸೋಮವಾರ ತಲ್ವಾರ್ ದಂಪತಿ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.