Wayanad; ನಿರಾಶ್ರಿತರ ಮನೆಗಳಲ್ಲಿ ಹೆಚ್ಚುತ್ತಿದೆ ಕಳ್ಳತನ; ಸಂಕಷ್ಟದಲ್ಲೂ ಮರೆಯಾದ ಮಾನವೀಯತೆ


Team Udayavani, Aug 4, 2024, 8:42 AM IST

Abandoned Homes Being Looted at Wayanad

ವಯನಾಡ್:‌ ಕೇರಳದ ವಯನಾಡ್‌ (Wayanad) ಜಿಲ್ಲೆಯು ಗುಡ್ಡ ಕುಸಿತದ (Landslide)  ಕಾರಣದಿಂದ ನಲುಗಿ ಹೋಗಿದೆ. ಹಲವಾರು ಜನರು ತಮ್ಮ ಮನೆಗಳನ್ನು ತೊರೆದು ನಿರಾಶ್ರಿತ ಕೇಂದ್ರಗಳಲ್ಲಿ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಕೆಲವು ಊರುಗಳಲ್ಲಿ ಮಣ್ಣು, ನೀರು ತುಂಬಿದ್ದು ಜನಜೀವನ ಸಹಜತೆಗೆ ಬರಲು ಇನ್ನಷ್ಟು ದಿನ ಬೇಕಾಗಿದೆ. ಇದೇ ವೇಳೆ ಖಾಲಿ ಇರುವ ಮನೆಗಳಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಬಗ್ಗೆ ವರದಿಯಾಗಿದೆ.

ತಾವು ಬಿಟ್ಟು ಬಂದಿರುವ ಮನೆಗಳಲ್ಲಿ ಕಳ್ಳತನ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸ್ಥಳಗಳಲ್ಲಿ ಪೊಲೀಸರು ಗಸ್ತು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳ್ಳರು ಈ ಬಿಕ್ಕಟ್ಟಿನ ಲಾಭವನ್ನು ಪಡೆದು ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ ಎಂದು ಸ್ಥಳಾಂತರಗೊಂಡ ನಿವಾಸಿಗಳು ಆತಂಕ ಹೊರಹಾಕಿದ್ದಾರೆ.

ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ ಪ್ರದೇಶಕ್ಕೆ ನುಗ್ಗುವವರನ್ನು ಗುರುತಿಸಿ ಶಿಕ್ಷಿಸಬೇಕು ಎಂದು ಸಂತ್ರಸ್ತ ಕೆಲವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡವರು ನಾವೇ ಎಂದು ಸಂತ್ರಸ್ತ ವ್ಯಕ್ತಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

“ನಾವು ಭೂಕುಸಿತ ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಮನೆಗಳನ್ನು ತ್ಯಜಿಸಿದ್ದೇವೆ. ಆದರೆ ಅದರ ನಂತರ ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ”‌ ಎಂದರು. ಅಲ್ಲದೆ ಸದ್ಯ ಅವರು ತಂಗಿರುವ ರೆಸಾರ್ಟ್‌ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದರು.

ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.