ಗಣರಾಜ್ಯೋತ್ಸವಕ್ಕೆ ರಾಜ್ಯದ ಜನಪದ ನೃತ್ಯ ಪ್ರಕಾರ ಸ್ತಬ್ಧಚಿತ್ರ
Team Udayavani, Jan 23, 2017, 9:41 AM IST
ಹೊಸದಿಲ್ಲಿ: ಜನವರಿ 26ರಂದು ಗಣ ರಾಜ್ಯೋತ್ಸವ ಪ್ರಯುಕ್ತ ದಿಲ್ಲಿಯ ರಾಜಪಥದಲ್ಲಿ ನಡೆಯಲಿರುವ ಪಥ ಸಂಚಲನದಲ್ಲಿ ಈ ಬಾರಿ ಜನಪದ ನೃತ್ಯ ಪ್ರಕಾರಗಳ ಸ್ತಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ. ರಾಜ್ಯ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ, ರಕ್ಷಣಾ ಸಚಿವಾಲಯದ ಬಿಗಿ ಕಾವಲಿನಲ್ಲಿ ಕಳೆದೊಂದು ತಿಂಗಳಿನಿಂದ ಸ್ತಬ್ಧಚಿತ್ರ ನಿರ್ಮಾಣಗೊಳ್ಳುತ್ತಿದ್ದು, ಅಂತಿಮ ಸ್ಪರ್ಶ ನೀಡಲಾಗುತ್ತಿದೆ.
ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶು ಕುಮಾರ್, ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧ ಚಿತ್ರದ ಬಗ್ಗೆ ವಿವರಣೆ ನೀಡಿದರು. ರಕ್ಷಣಾ ಇಲಾಖೆಯ ಆಯ್ಕೆ ಸಮಿತಿ ಕರ್ನಾಟಕದ ಜನ ಪದ ನೃತ್ಯಪ್ರಕಾರಗಳನ್ನು ಆಯ್ಕೆ ಮಾಡಿದೆ. ಈ ಸ್ತಬ್ಧಚಿತ್ರದಲ್ಲಿ ಗೊರವರ ಕುಣಿತ, ಡೊಳ್ಳು ಕುಣಿತ, ಸೋಮನ ಕುಣಿತ, ವೀರಗಾಸೆ, ಕಂಸಾಳೆ, ಪೂಜಾ ಕುಣಿತ, ಪಟ್ಟದ ಕುಣಿತ, ಜಗ್ಗಲಗೆ, ದಾಸರಪದ, ನಂದಿಧ್ವಜದಂತಹ ಜನಪದ ಪ್ರಕಾರಗಳು ಇರಲಿವೆ. ಇದಕ್ಕಾಗಿ ರಾಜ್ಯದಿಂದ ಕಲಾವಿದರನ್ನು ಆಯ್ಕೆ ಮಾಡಲಾಗಿದ್ದು, ಕಳೆದ 15 ದಿನಗಳಿಂದ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ರಾಜ್ಯದ ಪ್ರಸಿದ್ಧ ಕಲಾವಿದರಾದ ಶಶಿಧರ ಅಡಪ ಅವರ ಕೈಚಳಕದಲ್ಲಿ ರಾಜ್ಯದ ಸ್ತಬ್ಧಚಿತ್ರ ನಿರ್ಮಾಣಗೊಳ್ಳುತ್ತಿದ್ದು, ಒಂದು ತಿಂಗಳಿಂದ 25ಕ್ಕೂ ಹೆಚ್ಚು ಕಾರ್ಮಿಕರು ಇದಕ್ಕಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿ. ಮನೋಹರ್ ಅವರು ಸ್ತಬ್ಧಚಿತ್ರಕ್ಕೆ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಇಲಾಖೆಯ ಉಪ ನಿರ್ದೇಶಕರಾದ ಗುರುಮೂರ್ತಿ, ಗಿರೀಶ್ ಎಲ್.ಪಿ. ಅವರು ಸ್ತಬ್ಧಚಿತ್ರದ ನಿರ್ಮಾಣದ ಉಸ್ತುವಾರಿ ವಹಿಸಿದ್ದು, ಅಮರೇಶ್ ದೊಡ್ಡಮನಿ ಕಲಾವಿದರ ಉಸ್ತುವಾರಿ ವಹಿಸಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ, ಪತ್ರಕರ್ತರ ಜತೆ ಮಾತನಾಡಿದ ಕಲಾವಿದರು, ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ. ತಮಗೆ ಇದೊಂದು ಅವಿಸ್ಮರಣೀಯ ಸಮಯ. ನಡುಗುವ ಚಳಿಯಲ್ಲೂ ಮುಂಜಾನೆ ವೇಳೆ ರಾಜ್ಪಥ್ನಲ್ಲಿ ಅಭ್ಯಾಸ ನಡೆಸುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.