ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
Team Udayavani, Apr 28, 2022, 11:30 PM IST
ಮುಂಬಯಿ: ಟೆಂಪೋ ಚಾಲಕನೊಬ್ಬ ಚಾಕೊಲೇಟ್ ಆಮಿಷ ಒಡ್ಡಿ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಘಟನೆ ಘಾಟ್ಕೋಪರ್ ಪೂರ್ವದ ಪರಿಸರದಲ್ಲಿ ಸಂಭವಿಸಿದ್ದು, ಮುಂಬಯಿ ಪೊಲೀಸರು ಆರೋಪಿ ಸಚಿನ್ ಶಾಮ (35)ನನ್ನು ಬಂಧಿಸಿದ್ದಾರೆ.
ಮಗು ಒಂಟಿಯಾಗಿ ಇರುವುದನ್ನು ಕಂಡ ಆರೋಪಿಯು ಆಕೆಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದ. ಅನಂತರ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಬಾಲಕಿ ಅಳುತ್ತಿರುವುದನ್ನು ಕಂಡು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕೌನ್ಸೆಲಿಂಗ್ ಬಳಿಕ ಬಾಲಕಿ ಘಟನೆ ಬಗ್ಗೆ ವಿವರಿಸಿದ್ದಾಳೆ. ಪೊಲೀಸರು ಸ್ಥಳದಿಂದ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ (ಡಿಸಿಪಿ) ವಲಯ 7 ರ ಉಪ ಕಮಿಷನರ್ ಪ್ರಶಾಂತ್ ಕದಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.