CJI ಗೋಗೊಯಿ ನಿವೃತ್ತಿಗೂ ಮುನ್ನ ಇನ್ನೂ ಹಲವು ಮುಖ್ಯ ತೀರ್ಪು ಹೊರಬೀಳಲಿದೆ, ಯಾವುದು ಗೊತ್ತಾ?
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ಕೂಡಾ ಸೇರಿದೆ
Team Udayavani, Nov 12, 2019, 11:32 AM IST
ನವದೆಹಲಿ:ಸುದೀರ್ಘ ಕಾಲದಿಂದ ಕಾನೂನು ಸಮರದಲ್ಲಿದ್ದ ಹಾಗೂ ರಾಜಕೀಯವಾಗಿ ಸೂಕ್ಷ್ಮವಾಗಿದ್ದ ಅಯೋಧ್ಯೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದೆ. ಏತನ್ಮಧ್ಯೆ ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನಿವೃತ್ತಿ (ನ.17)ಯಾಗುವ ಮುನ್ನ ಇನ್ನೂ ಪ್ರಮುಖವಾದ ತೀರ್ಪುಗಳು ಹೊರಬೀಳಲಿದೆ.
ಸಿಜೆಐ ಇನ್ನು ಮೂರು ದಿನಗಳ ಕಾಲ ಕಾರ್ಯನಿರ್ವಹಿಸಲಿದ್ದು, ಬುಧವಾರ ಮತ್ತೆ ಸುಪ್ರೀಂಕೋರ್ಟ್ ಆರಂಭವಾಗಲಿದೆ. ನ.13ರಂದು ಅನರ್ಹ ಶಾಸಕರ ತೀರ್ಪು ಕೂಡಾ ಪ್ರಕಟವಾಗಲಿದೆ. ಇದನ್ನು ಹೊರತುಪಡಿಸಿ ಕೆಲವು ಮುಖ್ಯವಾದ ತೀರ್ಪು ಪ್ರಕಟವಾಗಲು ಬಾಕಿ ಇದೆ.
ಶಬರಿಮಲೆ ತೀರ್ಪಿನ ಪುನರ್ ಪರಿಶೀಲನೆ:
ಕಳೆದ ಸೆಪ್ಟಂಬರ್ ನಲ್ಲಿ ಸುಪ್ರೀಂಕೋರ್ಟ್ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಪೀಠ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ತೀರ್ಪು ನೀಡಿತ್ತು. ಪುರುಷರಷ್ಟೇ ಮಹಿಳೆಯರಿಗೂ ದೇವರನ್ನು ಪೂಜಿಸಲು ಹಕ್ಕು ಇದ್ದು, 10ರಿಂದ 50ವರ್ಷದೊಳಗಿನ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು. ಆದರೆ ಈ ತೀರ್ಪಿನ ಬಗ್ಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ ನೀಡಿರುವ ಶಬರಿಮಲೆ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸುಮಾರು 48 ಮೇಲ್ಮನವಿ ಸಲ್ಲಿಕೆಯಾಗಿದ್ದು, ಈ ಅರ್ಜಿಯ ವಿಚಾರಣೆಯನ್ನು ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಪೀಠ ಫೆಬ್ರುವರಿ 6ರಂದು ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.
ರಾಫೇಲ್ ಪುನರ್ ಪರಿಶೀಲನಾ ಅರ್ಜಿ:
ರಾಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ರಕ್ಷಣಾ ಇಲಾಖೆಯ ವಿಚಾರದಲ್ಲಿ ಪ್ರಧಾನಿ ಸಚಿವಾಲಯ ಹಸ್ತಕ್ಷೇಪ ನಡೆಸಿದೆ ಎಂದು ಆರೋಪಿಸಲಾಗಿದೆ. ರಾಫೇಲ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಈ ವಿಷಯದ ಬಗ್ಗೆ ನ್ಯಾಯಾಂಗ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.
ಏತನ್ಮಧ್ಯೆ ರಾಫೇಲ್ ಖರೀದಿಯಲ್ಲಿ ಪ್ರಧಾನಿ ಸಚಿವಾಲಯ ಹಸ್ತಕ್ಷೇಪ ನಡೆಸಿದೆ ಎಂಬುದಾಗಿ ರಕ್ಷಣಾ ಸಚಿವಾಲಯದಿಂದ ಸೋರಿಕೆಯಾದ ದಾಖಲೆಯ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯ ತೀರ್ಪು ಪ್ರಕಟವಾಗಲು ಬಾಕಿ ಇದೆ.
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ:
ರಾಫೇಲ್ ಒಪ್ಪಂದದ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೂಡಾ ಚೌಕಿದಾರ್ ಚೋರ್ ಹೈ ಎಂಬುದನ್ನು ಒಪ್ಪಿಕೊಂಡಿತ್ತು ಎಂಬುದಾಗಿ ರಾಹುಲ್ ಗಾಂಧಿ ಪತ್ರಿಕಾ ಹೇಳಿಕೆ ನೀಡಿದ್ದರು. ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ರಾಹುಲ್ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದರು.
ರಾಫೇಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಯಾವುದೇ ರಾಜಕೀಯವಾದ ಹೇಳಿಕೆಯನ್ನು ನೀಡಿಲ್ಲ ಎಂದು ಸಿಜೆಐ ರಂಜನ್ ಗೋಗೊಯಿ ಸ್ಪಷ್ಟಪಡಿಸಿದ್ದರು. ಈ ಬಗ್ಗೆ ಕ್ಷಮಾಪಣೆ ಕೇಳಿ ರಾಹುಲ್ ಸುಪ್ರೀಂಗೆ ಅಫಿಡವಿತ್ ಸಲ್ಲಿಸಿದ್ದರು. ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಕೆ ಕೌಲ್ ಮತ್ತು ಜಸ್ಟೀಸ್ ಕೆಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.
ಹಣಕಾಸು ಕಾಯ್ದೆ 2017 ಮತ್ತು ಟ್ರಿಬ್ಯೂನಲ್ಸ್ ಮೇಲೆ ಕೇಂದ್ರದ ಹಕ್ಕು ಸ್ಥಾಪನೆ:
ವಿವಿಧ ಟ್ರಿಬ್ಯೂನಲ್ಸ್ ಗಳ ಸದಸ್ಯರ ನೇಮಕದ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಉಲ್ಲಂಘಿಸಿ ಆಯ್ಕೆ ಮಾಡುವ ಮೂಲಕ ಟ್ರಿಬ್ಯೂನಲ್ ಗಳ ಮೇಲೆ ಹಕ್ಕು ಸಾಧಿಸಲು ಮುಂದಾಗಿದೆ ಎಂದು ಆರೋಪಿಸಿ ದಾಖಲಾಗಿದ್ದ 18 ಅರ್ಜಿಗಳ ವಿಚಾರಣೆಯನ್ನು ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ನಡೆಸಿ ಏಪ್ರಿಲ್ ನಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು.
ಹಸಿರು ಪೀಠ, ಸೆಂಟ್ರಲ್ ಅಡ್ಮಿನಿಸ್ಟ್ರೇಟಿವ್ ಟ್ರಿಬ್ಯೂನಲ್, ಆರ್ಮ್ಡ್ ಫೋರ್ಸ್ ಟ್ರಿಬ್ಯೂನಲ್ ಸೇರಿದಂತೆ 17 ಟ್ರಿಬ್ಯೂನಲ್ಸ್ ಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಂಸ್ಥೆಗಳಾಗಿವೆ. ಹೈಕೋರ್ಟ್ ಜಡ್ಜ್ ಗಳ ಸೇವೆಯ ಷರತ್ತಿನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆದರೆ ಕೇಂದ್ರ ಸರ್ಕಾರ ಟ್ರಿಬ್ಯೂನಲ್ಸ್ ಗಳ ಮೇಲೆ ಹಕ್ಕು ಸ್ಥಾಪಿಸಲು ಮುಂದಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ದೂರಲಾಗಿದೆ.
2017ರ ಹಣಕಾಸು ಕಾಯ್ದೆ(ಹಣಕಾಸು ಮಸೂದೆ)ಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು. ಟ್ರಿಬ್ಯೂನಲ್ಸ್ ಸದಸ್ಯರಿಗೆ ನೀಡುವ ಸಂಬಳ ಮತ್ತು ಭತ್ಯೆ ಪಾವತಿ ಬಗೆಗಿನ ನಿಬಂಧನೆ ಬಗ್ಗೆ ವಾದ ಮಂಡಿಸಲಾಗಿತ್ತು. ಕೇಂದ್ರದ ನಿಬಂಧನೆ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.
ಆರ್ ಟಿಐ ಕಾಯ್ದೆಯಡಿ ಸಿಜೆಐ ಕಚೇರಿ?
ಸುಪ್ರೀಂಕೋರ್ಟ್ ನೀಡುವ ಎಲ್ಲಾ ತೀರ್ಪು ಪಾರದರ್ಶಕವಾಗಿದೆ ಎಂಬುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಜೆಐ ಕಚೇರಿ ಕೂಡಾ ಆರ್ ಟಿಐ ಅಡಿ ಬರಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. 2010ರಲ್ಲಿಯೇ ಸುಪ್ರೀಂಕೋರ್ಟ್ ಸಾರ್ವಜನಿಕ ಉತ್ತರದಾಯಿತ್ವ ಹೊಂದಿದ್ದು, ಸಿಜೆಐ ಕಚೇರಿ ಕೂಡಾ ಆರ್ ಟಿಐ ಕಾಯ್ದೆಯಡಿ ಬರಬೇಕಾಗಿದೆ ಎಂದು ದೆಹಲಿ ಹೈಕೋರ್ಟ್ ತೀರ್ಪನ್ನು ನೀಡಿತ್ತು. ಈ ತೀರ್ಪು ನ್ಯಾಯಾಂಗ ಪ್ರಕ್ರಿಯೆ ಮೇಲೆ ಸಮಸ್ಯೆ ತಂದೊಡ್ಡಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದು, ತೀರ್ಪು ಹೊರಬೀಳುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.