ಹಬ್ಬಗಳ ಹಿನ್ನೆಲೆ ಅಡುಗೆ ಎಣ್ಣೆ ದರ ಇಳಿಕೆ
Team Udayavani, Sep 12, 2021, 8:30 AM IST
ಹೊಸದಿಲ್ಲಿ: ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದೆ. ಸುಂಕ ಇಳಿಕೆಯಿಂದಾಗಿ ಪ್ರತೀ ಲೀಟರ್ ಅಡುಗೆ ಎಣ್ಣೆಯ ಬೆಲೆ 4 ರೂ.ಗಳಿಂದ 5 ರೂ.ಗಳ ವರೆಗೆ ಕಡಿಮೆಯಾಗಲಿದೆ.
ಇದರಿಂದ ಕೇಂದ್ರ ಸರಕಾರಕ್ಕೆ 1,100 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಮೂರು ಕಚ್ಚಾ ಮತ್ತು ಸಂಸ್ಕರಿತ ದರ್ಜೆಯ ಎಣ್ಣೆಗಳ ಆಮದು ಸುಂಕ ತಗ್ಗಿಸಲಾಗಿದೆ.
ವಿತ್ತ ಸಚಿವಾಲಯದ ಪ್ರಕಟನೆಯ ಪ್ರಕಾರ ಕಚ್ಚಾ ತಾಳೆ ಎಣ್ಣೆಯ ಆಮದು ಸುಂಕವನ್ನು ಶೇ. 10ರಿಂದ ಶೇ. 2.5ಕ್ಕೆ, ಕಚ್ಚಾ ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 7.5ರಿಂದ ಶೇ. 2.5ಕ್ಕೆ ಇಳಿಕೆ ಮಾಡಲಾಗಿದೆ.
ಈ ಕ್ರಮದಿಂದ ತಾಳೆ ಎಣ್ಣೆ, ಸೋಯಾಬೀನ್ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಬೆಲೆ ಶೇ. 24.75ರಷ್ಟು ಕಡಿಮೆಯಾಗುವ ನಿರೀಕ್ಷೆಯನ್ನು ಸರಕಾರ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್ ಕೇಂದ್ರ
E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್ ಕಡ್ಡಾಯ: ಪ್ರಾಧಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.