“ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ”: ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ
Team Udayavani, Sep 20, 2021, 2:38 PM IST
ಮುಂಬೈ : ತಮ್ಮ ಮನೆ ಹಾಗೂ ಕಚೇರಿ ಮೇಲೆ ತೆರಿಗೆ ಇಲಾಖೆಯಿಂದ ನಡೆದ ದಾಳಿ ಬಗ್ಗೆ ನಟ ಸೋನು ಸೂದ್ ಮೌನ ಮುರಿದಿದ್ದಾರೆ. ತಮ್ಮ ವಿರುದ್ಧ ಕೇಳಿ ಬಂದಿರುವ ತೆರಿಗೆ ವಂಚನೆಯ ಆರೋಪಕ್ಕೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ನಾಲ್ಕು ದಿನಗಳ ಕಾಲ ಸೋನು ಅವರಿಗೆ ಸೇರಿದ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, ಈ ನಟನಿಂದ 20 ಕೋಟಿ ರೂ. ತೆರಿಗೆ ವಂಚನೆಯಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದರು. ಇದಕ್ಕೆ ಇಂದು (ಸೆ.20) ಪ್ರತಿಕ್ರಿಯೆ ನೀಡಿರುವ ಸೋನು, “ನನ್ನ ಚಾರಿಟೆಬಲ್ ಟ್ರಸ್ಟ್ ನಲ್ಲಿರುವ ಪ್ರತಿ ಒಂದು ರೂಪಾಯಿ ಕೂಡ ಕಷ್ಟದಲ್ಲಿರುವವರ ಜೀವ ಉಳಿಸಲು ಕಾಯುತ್ತಿದೆ. ಕಠಿಣವಾದ ದಾರಿಯಲ್ಲಿಯೂ ಕೂಡಾ ಸುಲಭವಾದ ಪ್ರಯಾಣವು ಕಾಣಬಹುದು. ಎಲ್ಲಾ ಹಿಂದೂಸ್ತಾನಿಗಳ ಆಶೀರ್ವಾದ ಪರಿಣಾಮ ಎಂದು ಅನಿಸುತ್ತದೆ. ನಾವು ಎಲ್ಲಾ ಸಂದರ್ಭದಲ್ಲೂ ನಮ್ಮ ದೃಷ್ಟಿಯಿಂದ ನಿಜವಾಗಿ ಏನು ನಡೆದಿದೆ ಎಂಬುವುದನ್ನು ಹೇಳಬೇಕಾಗಿಲ್ಲ. ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ,” ಎಂದು ಕೂಡಾ ಹೇಳಿದ್ದಾರೆ.
“सख्त राहों में भी आसान सफर लगता है,
हर हिंदुस्तानी की दुआओं का असर लगता है” ? pic.twitter.com/0HRhnpf0sY— sonu sood (@SonuSood) September 20, 2021
“ನನ್ನ ಎಲ್ಲಾ ಶಕ್ತಿ ಹಾಗೂ ಹೃದಯದಿಂದ ನಾನು ಭಾರತದ ಜನರ ಸೇವೆಯನ್ನು ಮಾಡುವ ಪ್ರತಿಜ್ಞೆಯನ್ನು ಮಾಡಿದೆ. ನನ್ನ ಟ್ರಸ್ಟ್‌ನಲ್ಲಿರುವ ಎಲ್ಲಾ ಒಂದು ರೂಪಾಯಿ ಹಣವು ಅತಿ ಮೌಲ್ಯಯುತ ಜೀವವನ್ನು ಉಳಿಸಲು ಹಾಗೂ ಅಗತ್ಯವಿರುವವರಿಗೆ ಸಹಾಯ ಮಾಡಲು ಕಾಯುತ್ತಿದೆ. ನಾನು ಹಲವಾರು ಸಂದರ್ಭದಲ್ಲಿ ಹಲವು ಬ್ರಾಂಡ್‌ಗಳಿಗೆ ನನ್ನ ಸಮಾಜ ಕಲ್ಯಾಣ ಕಾರ್ಯಕ್ಕಾಗಿ ದೇಣಿಗೆ ನೀಡಲು ಕೇಳಿದ್ದೇನೆ, ಅದು ಇನ್ನು ಕೂಡಾ ಮುಂದುವರಿಯಲಿದೆ. ನಾನು ಕಳೆದ ನಾಲ್ಕು ದಿನಗಳಿಂದ ಕೆಲವು ಅತಿಥಿಗಳ ಸತ್ಕಾರ ಮಾಡುತ್ತಿದ್ದೆ, ಆದ್ದರಿಂದ ನನಗೆ ಕಳೆದ ನಾಲ್ಕು ದಿನದಿಂದ ನಿಮ್ಮ ಸೇವೆಯನ್ನು ಮಾಡಲು ಸಾಧ್ಯವಾಗಿಲ್ಲ. ಈಗ ನಾನು ಮತ್ತೆ ಜನರ ಸೇವೆಗಾಗಿ ವಾಪಾಸ್ ಬಂದಿದ್ದೇನೆ. ನನ್ನ ಪ್ರಯಾಣ ಮುಂದುವರಿಯುತ್ತದೆ,” ಎಂದು ಟ್ವೀಟರ್‌ನಲ್ಲಿ ಸೋನು ಸೂದ್ ತಿಳಿಸಿದ್ದಾರೆ.
ಇನ್ನು ನಟ ಸೋನು ಸೂದ್ ಸುಮಾರು 20 ಕೋಟಿಗಿಂತ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ.ಸೋನು ಅವರ ಲಾಭರಹಿತ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆಗಿದೆ. ಸೋನು ಅವರ ಟ್ರಸ್ಟ್ ಗೆ ಕಳೆದ ಜುಲೈನಿಂದ ಈ ವರ್ಷದ ಏಪ್ರಿಲ್ ವರೆಗೆ 18 ಕೋಟಿ ರೂ. ಹರಿದು ಬಂದಿದೆ. ಇದರಲ್ಲಿ 1.9 ಕೋಟಿ ಹಣ ಮಾತ್ರ ಸಾಮಾಜಿಕ ಕಾರ್ಯಕ್ಕೆ ಬಳಕೆಯಾಗಿದೆ. ಉಳಿದ 17 ಕೋಟಿ ರೂ. ಬಳಕೆಯಾಗದೆ ಹಾಗೆ ಉಳಿದುಕೊಂಡಿದೆ ಎಂದು ಶನಿವಾರ ಆದಾಯ ತೆರಿಗೆ ಇಲಾಖೆ ಹೇಳಿತ್ತು.
More power to u Sonu ji. U are a hero to millions of Indians https://t.co/TACjG8ugOP
— Arvind Kejriwal (@ArvindKejriwal) September 20, 2021
ನಟ ಸೋನು ಸೂದ್ ಪರವಾಗಿ ದೆಹಲಿ ಮುಖ್ಯಮಂತ್ರಿ, ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. “ಸೋನು ಜೀ ಗೆ ಅಧಿಕ ಬಲವಿದೆ. ಲಕ್ಷಾಂತರ ಭಾರತೀಯರ ಹೀರೋ ನೀವು,” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.