ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಖುಷ್ಬೂ ರಾಜೀನಾಮೆ! ಬಿಜೆಪಿ ಸೇರ್ಪಡೆ ಬಹುತೇಕ ಖಚಿತ
Team Udayavani, Oct 12, 2020, 10:21 AM IST
ಚೆನ್ನೈ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಇಂದು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಟಿ ಖುಷ್ಟಬೂ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಖುಷ್ಬೂ, ತಾನೂ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದಿದ್ದಾರೆ.
ನಾನು ದೇಶ ಸೇವೆ ಮಾಡುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ನನಗೆ ಇಲ್ಲಿ ಹೆಸರು ಗಳಿಸುವ ಅಥವಾ ಹಣ ಮಾಡುವ ಉದ್ದೇಶ ಇರಲಿಲ್ಲ. ಜನರ ಸಂಪರ್ಕವೇ ಇಲ್ಲದ ಪಕ್ಷದ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವು ನಾಯಕರು ನಮ್ಮಂತವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಪಕ್ಷಕ್ಕಾಗಿ ಪ್ರಾಮಾಣಿಕ ಕೆಲಸ ಮಾಡುವ ನಮ್ಮಂತವರನ್ನು ಇಲ್ಲಿ ತಡೆಯಲಾಗುತ್ತಿದೆ ಎಂದು ಖುಷ್ಬೂ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಹಿರಿಯ ಸಂಗೀತ ನಿರ್ದೇಶಕ, ಚಂದನವನದ ರತ್ನ ರಾಜನ್ ವಿಧಿವಶ
ಬಿಜೆಪಿ ಸೇರ್ಪಡೆ ಬಹುತೇಕ ಖಚಿತ
ಮುಂದಿನ ವರ್ಷವೇ ಅವರ ತವರು ರಾಜ್ಯ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್. ಮುರುಗನ್ ಅವರ ಉಪಸ್ಥಿತಿಯಲ್ಲಿ ಖುಷ್ಬೂ ಅವರು ಸೋಮವಾರ ಬಿಜೆಪಿ ಹೈಕಮಾಂಡ್ ಅನ್ನು ಭೇಟಿಯಾಗಲಿದ್ದು, ಬಳಿಕ ಅಧಿಕೃತವಾಗಿ ಪಕ್ಷ ಸೇರುವ ಕುರಿತಂತೆ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಾರದ ಹಿಂದೆಯೇ ಖುಷ್ಬೂ ಬಿಜೆಪಿ ಸೇರ್ಪಡೆ ಕುರಿತು ವದಂತಿ ಹಬ್ಬಿತ್ತು. ಆದರೆ ಅದನ್ನು ಅವರು ತಳ್ಳಿಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.