ತಮಿಳುನಾಡು ಚುನಾವಣೆ : ಬಿಜೆಪಿ ಮೈತ್ರಿಯಿಂದ ಹೊರ ಬಂದ ಡಿಎಂಡಿಕೆ
ಮೈತ್ರಿಯಿಂದ ಹೊರ ಬಂದ ಡಿಎಂಡಿಕೆ
Team Udayavani, Mar 9, 2021, 4:44 PM IST
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದ್ದು, ಚುನಾವಣಾ ಕಣ ರಂಗೇರುತ್ತಿದ್ದೆ. ಇದರ ನಡುವೆ ರಾಜ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ನಟ ವಿಜಯಕಾಂತ ನೇತೃತ್ವದ ಡಿಎಂಡಿಕೆ ಪಕ್ಷ ಸೀಟು ಹಂಚಿಕೆ ವಿಚಾರವಾಗಿ ಅಸಮಧಾನ ಮಾಡಿಕೊಂಡು ಮೈತ್ರಿಯಿಂದ ಹೊರ ನಡೆದಿದೆ.
ದೇಸಿಯಾ ಮುರ್ಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ಪಾರ್ಥಸಾರಥಿ ಪ್ರತಿಕ್ರಿಯಿಸಿದ್ದು, 234 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ನಾವು 23 ಸೀಟುಗಳನ್ನು ಕೇಳಿದ್ದೆವು. ಆದ್ರೆ ಕೇವಲ 15 ಕ್ಷೇತ್ರಗಳನ್ನು ಮಾತ್ರ ಕೊಡುವುದಾಗಿ ಹೇಳಿದ್ದು, ಇದರಿಂದ ಅಸಮಧಾನಗೊಂಡು, ಮೈತ್ರಿಯಿಂದ ಹೊರ ಬಂದಿದ್ದೇವೆ ಎಂದರು.
ಬಿಜೆಪಿ ಮಿತ್ರ ಪಕ್ಷವಾಗಿರುವ ಎಐಎಡಿಎಂಕೆ ಪ್ರತಿಕ್ರಿಯೆ ನೀಡಿದ್ದು, ಕೊಟ್ಟಿರುವ ಸೀಟುಗಳನ್ನು ನಿರಾಕರಿಸಿದೆ. ಇದು ದುರದೃಷ್ಟಕರ ಎಂದಿದೆ. ವಿಜಯಕಾಂತ ಮೈತ್ರಿಯಿಂದ ಹೊರ ಬಂದ ಕಾರಣ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಹಿಂದೆ ತಮಿಳಿನಾಡು ಚುನಾವಣೆಯನ್ನು ಎದುರಿಸಲು ಬಿಜೆಪಿ, ಎಐಎಡಿಎಂಕೆ ಮತ್ತು ಡಿಎಂಡಿಕೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು.
ಡಿಎಂಡಿಕೆ ಪಕ್ಷವು 2003 ರಿಂದ ತಮಿಳುನಾಡಿನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿತು. 2006 ರಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.