Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Team Udayavani, Nov 25, 2024, 9:53 AM IST
ಹೊಸದಿಲ್ಲಿ: ಮಹಾರಾಷ್ಟ್ರ, ಝಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸೋಮವಾರ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಡಿ.20ರ ವರೆಗೂ ಅಧಿವೇಶನ ನಡೆಯಲಿದ್ದು, ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಇದೇ ಅವಧಿಯಲ್ಲಿ ಮಂಡಿಸಲು ಕೇಂದ್ರ ಸರಕಾರ ತುದಿಗಾಲಲ್ಲಿ ನಿಂತಿದೆ. ಇನ್ನೊಂದೆಡೆ ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ದೋಷಾರೋಪ ನಿಗದಿ, ಮಣಿಪುರ ಗಲಭೆ ಮುಂತಾದ ವಿಚಾರಗಳನ್ನಿಟ್ಟುಕೊಂಡು ಸರಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ “ಐಎನ್‌ಡಿಐಎ’ ಒಕ್ಕೂಟ ಸಜ್ಜಾಗಿದೆ.
ಸರ್ವಪಕ್ಷ ಸಭೆ: ಸುಗಮ ಕಲಾಪದ ಉದ್ದೇಶದಿಂದ ಕೇಂದ್ರ ಸರಕಾರವು ರವಿವಾರ ಸರ್ವಪಕ್ಷಗಳ ಸಭೆ ನಡೆಸಿದೆ. ಅಧಿವೇಶನದಲ್ಲಿ ಅದಾನಿ ಗ್ರೂಪ್ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಚರ್ಚೆಯಾಗಬೇಕು ಎಂದು ವಿಪಕ್ಷಗಳ ನಾಯಕರು ಈ ವೇಳೆ ಒತ್ತಾಯಿಸಿದ್ದಾರೆ. ಜತೆಗೆ ಮಣಿಪುರ ಗಲಭೆ, ರೈಲು ಅಪಘಾತ, ವಾಯುಮಾಲಿನ್ಯ ಬಗ್ಗೆಯೂ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. ಸಭೆಯ ಬಳಿಕ ಈ ಬಗ್ಗೆ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸರಕಾರವು ಯಾವುದೇ ವಿಷಯದ ಚರ್ಚೆಗೂ ಸಿದ್ಧವಿದೆ. ಆದರೆ ಯಾವ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂಬುದನ್ನು ಎರಡೂ ಸದನಗಳ ಕಲಾಪ ಸಲಹಾ ಸಮಿತಿಯು ನಿರ್ಧರಿಸಲಿದೆ ಎಂದಿದ್ದಾರೆ.
ಒಂದು ಚುನಾವಣೆ ಮಸೂದೆ ಮಂಡನೆಗೂ ಸಿದ್ಧತೆ
ಜಂಟಿ ಸಂಸದೀಯ ಸಮಿತಿಯ ಪರಿಶೀಲನೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸಿ, ಅಂಗೀಕಾರ ಪಡೆಯಲು ಸರಕಾರ ಚಿಂತನೆ ನಡೆಸಿದೆ. ಜತೆಗೆ, ಮತ್ತೂಂದು ವಿವಾದಿತ ಮಸೂದೆಯಾದ “ಒಂದು ದೇಶ, ಒಂದು ಚುನಾವಣೆ’ಯನ್ನೂ ಇದೇ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ.
ನಾಳೆ ಸಂವಿಧಾನ ದಿನ: ಹಳೇ ಸಂಸತ್ ಭವನದಲ್ಲಿ ವಿಶೇಷ ಕಾರ್ಯಕ್ರಮ
ದೇಶವು ಸಂವಿಧಾನವನ್ನು ಸ್ವೀಕರಿಸಿ 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನ.26ರ ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಅದರಂತೆ, ಹಳೆಯ ಸಂಸತ್ ಭವನದ ಐತಿಹಾಸಿಕ ಸಂವಿಧಾನದ ಸದನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಲ್ಲೇ 1949ರ ನವೆಂಬರ್ 26ರಂದು ಸಂವಿಧಾನಕ್ಕೆ ಅಂಗೀಕಾರ ದೊರೆತಿತ್ತು.
ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.