![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 15, 2023, 10:44 AM IST
ನವದೆಹಲಿ: ಶುಕ್ರವಾರ ಮುಂಜಾನೆ ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ನಾಲ್ಕನೇ ಹಂತದ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಇಸ್ರೋ ತಿಳಿಸಿದೆ.
ಈ ಕುರಿತು ಟ್ವಿಟರ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಇಸ್ರೊ ಗುರುವಾರ ತಡರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಕಾರ್ಯ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿಕೊಂಡಿದೆ.
ಸೂರ್ಯನನ್ನು ಅಧ್ಯಯನ ಮಾಡಲು ಲಗ್ರೇಂಜ್ ಪಾಯಿಂಟ್ 1 (L1) ಗೆ ಹೊರಟಿರುವ ಬಾಹ್ಯಾಕಾಶ ನೌಕೆಯು ಮುಂದಿನ ಸೆಪ್ಟೆಂಬರ್ 19 ರಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ನಿರ್ಣಾಯಕ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಅಳವಡಿಕೆಗೆ (TL1I) ಒಳಗಾಗಲಿದೆ ಎಂದು ISRO ಹೇಳಿದೆ.
ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1, ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಹಾರಾಟ ನಡೆಸಿತು.
Aditya-L1 Mission:
The fourth Earth-bound maneuvre (EBN#4) is performed successfully.ISRO’s ground stations at Mauritius, Bengaluru, SDSC-SHAR and Port Blair tracked the satellite during this operation, while a transportable terminal currently stationed in the Fiji islands for… pic.twitter.com/cPfsF5GIk5
— ISRO (@isro) September 14, 2023
ಇದನ್ನೂ ಓದಿ: Ramanagar; ಟೈರ್ ಸ್ಪೋಟಗೊಂಡು ಬೃಹತ್ ಕಂಟೇನರ್ ಪಲ್ಟಿ; ಅಡಿಯಲ್ಲಿ ಸಿಲುಕಿ ಚಾಲಕನ ನರಳಾಟ
ಭೂಮಿಯ ಪರಿಭ್ರಮಣದಲ್ಲಿದ್ದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಲಗ್ರಾಂಜಿಯನ್ 1 ಬಿಂದುವಿಗೆ ರವಾನಿಸುವ ಮುಂದಿನ ಪ್ರಕ್ರಿಯೆ ಸೆಪ್ಟೆಂಬರ್ 19 ತಡರಾತ್ರಿ 2 ಗಂಟೆಗೆ ನಿಗದಿಯಾಗಿದೆ ಎಂದು ತಿಳಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.