Ayodhya ಮಹಿಳಾ ಚಾಲಕರಿರುವ 51 ಬಸ್‌ಗಳಿಗೆ ಚಾಲನೆ
Team Udayavani, Oct 22, 2023, 7:58 PM IST
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ “ಮಹಿಳಾ ಸಾರಥಿ’ ಯೋಜನೆಯಡಿ ಮಹಿಳಾ ಚಾಲಕರು ಮತ್ತು ನಿರ್ವಾಹಕರು ಇರುವ 51 ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು.
ಈ ಬಸ್‌ಗಳಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್, “ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಮಹಿಳೆಯರಿಗೆ ಗೌರವ ನೀಡುವುದು ಹಾಗೂ ಅವರ ಘನತೆ ಕಾಪಾಡುವುದು ಮುಖ್ಯ. ರಾಜ್ಯ ಸಾರಿಗೆ ನಿಗಮವು 51 ಬಸ್‌ಗಳಿಗೆ ಮಹಿಳಾ ಚಾಲಕಿಯರು ಹಾಗೂ ನಿರ್ವಾಹಕರನ್ನು ನೇಮಿಸಿದೆ.
ಈ ಮೂಲಕ ಮಹಿಳೆಯರು ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಸೀಮಿತ ಎನ್ನುವ ಪರಿಕಲ್ಪನೆ ತಪ್ಪು ಎಂಬುದು ಸಾಬೀತಾಗಿದೆ. ರಾಜ್ಯದಲ್ಲಿ ಪೊಲೀಸ್ ಹುದ್ದೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.