83 ತೇಜಸ್ ಯುದ್ಧ ವಿಮಾನ ಖರೀದಿ: HAL ಜತೆ 48 ಸಾವಿರ ಕೋಟಿ ರೂ. ಒಪ್ಪಂದ: ಕೇಂದ್ರ
ತೇಜಸ್ ಯುದ್ಧ ವಿಮಾನಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯ ಹಸಿರು ನಿಶಾನೆ
Team Udayavani, Feb 2, 2021, 5:18 PM IST
ನವದೆಹಲಿ/ಬೆಂಗಳೂರು: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಫೆ.3ರಂದು ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಏತನ್ಮಧ್ಯೆ ಭಾರತೀಯ ವಾಯುಪಡೆಗೆ 83 ಅತ್ಯಾಧುನಿಕ (ಎಲ್ ಸಿಎ ಎಂಕೆ-1ಎ) ತೇಜಸ್ ಜೆಟ್ ಅನ್ನು ಸರಬರಾಜು ಮಾಡಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್)ಗೆ ಕೇಂದ್ರ ಸರ್ಕಾರ 48,000 ಕೋಟಿ ರೂಪಾಯಿಯ ಗುತ್ತಿಗೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ರಕ್ಷಣಾ ಸಮಿತಿ ಸಭೆಯಲ್ಲಿ, ಭಾರತೀಯ ವಾಯುಪಡೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು 83 ಅತ್ಯಾಧುನಿಕ ತಂತ್ರಜ್ಞಾನದ ತೇಜಸ್ ಜೆಟ್ ಖರೀದಿಗೆ ಜನವರಿ 13ರಂದು ಒಪ್ಪಿಗೆ ನೀಡಿತ್ತು. ಇದೊಂದು ಅತೀ ದೊಡ್ಡ ದೇಶೀ ರಕ್ಷಣಾ ವ್ಯವಹಾರದ ಒಪ್ಪಂದವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದರು.
ಕೇಂದ್ರ ರಕ್ಷಣಾ ಸಮಿತಿಯ ಅನುಮತಿ ಪಡೆದು ಹತ್ತು ತಿಂಗಳ ನಂತರ ದೇಶೀ ಸಂಸ್ಥೆಯಾದ ಎಚ್ ಎಎಲ್ ನಿಂದ 83 ಲಘು ತೇಜಸ್ ಯುದ್ಧ ವಿಮಾನಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯ ಹಸಿರು ನಿಶಾನೆ ತೋರಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
83 ಜೆಟ್ ಯುದ್ಧ ವಿಮಾನಗಳಲ್ಲಿ 73 ಎಂಕೆ 1ಎ ಯುದ್ಧ ವಿಮಾನ ಮತ್ತು ಹತ್ತು ತರಬೇತಿ ಯುದ್ಧ ವಿಮಾನಗಳು ಸೇರಿರುವುದಾಗಿ ವರದಿ ವಿವರಿಸಿದೆ.
ಈಗಾಗಲೇ ಕೇಂದ್ರ ರಕ್ಷಣಾ ಸಚಿವಾಲಯ 40 ತೇಜಸ್ ಯುದ್ಧ ವಿಮಾನ ಖರೀದಿಗೆ ಅನುಮತಿ ನೀಡಿದೆ. 83 ಲಘು ತೇಜಸ್ ಯುದ್ಧ ವಿಮಾನ ಖರೀದಿ ಒಪ್ಪಂದದ ಜೊತೆಗೆ ಒಟ್ಟು ಆರ್ಡರ್ ನೀಡಿದ ತೇಜಸ್ ಯುದ್ಧ ವಿಮಾನಗಳ ಸಂಖ್ಯೆ 123ಕ್ಕೆ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.