Malappuram; ಆಫ್ರಿಕಾ ಫುಟ್ಬಾಲ್ ಆಟಗಾರನನ್ನು ಅಟ್ಟಾಡಿಸಿದ ಜನತೆ! ಆಗಿದ್ದೇನು?
Team Udayavani, Mar 14, 2024, 11:31 AM IST
ಕೊಚ್ಚಿ: ಆಫ್ರಿಕಾದ ಫುಟ್ ಬಾಲ್ ಆಟಗಾರನೊಬ್ಬನನ್ನು ಬೆನ್ನಟ್ಟಿದ ಜನಸಮೂಹವು ಆತನಿಗೆ ಥಳಿಸಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.
ಐವರಿ ಕೋಸ್ಟ್ ದೇಶದ ದೈರ್ರಾಸೌಬಾ ಹಾಸನ್ ಜೂನಿಯರ್ ಹಲ್ಲೆಗೊಳಗಾದ ವ್ಯಕ್ತಿ.
ಸೆವೆನ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಜವಾಹರ್ ಮಾವೂರ್ ಎಂಬ ಫುಟ್ಬಾಲ್ ಕ್ಲಬ್ ಅನ್ನು ಹಾಸನ್ ಜೂನಿಯರ್ ಪ್ರತಿನಿಧಿಸುತ್ತಿದ್ದಾರೆ. ಸೆವೆನ್ಸ್ ಫುಟ್ಬಾಲ್ ಮಲಪ್ಪುರಂನಲ್ಲಿ ಪ್ರಸಿದ್ಧ ಕ್ರೀಡಾಕೂಟವಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವಿಡಿಯೋದಲ್ಲಿ, ನೀಲಿ ಟೀ ಶರ್ಟ್ ಧರಿಸಿದ್ದ ದೈರ್ರಾಸೌಬಾ ಹಾಸನ್ ಜೂನಿಯರ್ ನನ್ನು ಅರೀಕೋಡ್ ನ ಮೈದಾನದಲ್ಲಿ ಜನರ ಗುಂಪು ಅಟ್ಟಾಡಿಸಿಕೊಂಡು ಹೋಗುವುದು ಕಂಡು ಬಂದಿದೆ.
ಐವರಿ ಕೋಸ್ಟ್ ಫುಟ್ಬಾಲ್ ಆಟಗಾರನನ್ನು ಜನರು ಹಿಡಿದು ಪದೇ ಪದೇ ಥಳಿಸುತ್ತಾರೆ. ಕೆಲವು ಪ್ರೇಕ್ಷಕರು ಫುಟ್ಬಾಲ್ ಆಟಗಾರ ತಮ್ಮಲ್ಲಿ ಒಬ್ಬನನ್ನು ಒದ್ದರು ಎಂದು ಆರೋಪಿಸಿದರು, ಇದು ಘಟನೆಗೆ ಕಾರಣವಾಯಿತು.
An Ivory Coast football player was attacked and racially abused in Malappuram, Kerala.
Ivory Coast footballer Dairrassouba Hassane Junior alleged that fans threw stones at him and called him a monkey during a football match in Malappuram, Kerala.#Kerala #Malappuram #football pic.twitter.com/vn2f8RVN5J
— Biju VB (@Biju_Vaisyathil) March 13, 2024
ಬಿಳಿ ಟೀ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಆಫ್ರಿಕನ್ ವ್ಯಕ್ತಿಯನ್ನು ಹೊಡೆತಗಳಿಂದ ರಕ್ಷಿಸುತ್ತಿರುವುದನ್ನು ಕಾಣಬಹುದು. ಬಿಳಿ ಟಿ-ಶರ್ಟ್‌ನಲ್ಲಿರುವ ವ್ಯಕ್ತಿ ಕೋಪಗೊಂಡ ಜನರೊಂದಿಗೆ ಮಾತನಾಡುತ್ತಿರುವುದು ಕಂಡುಬರುತ್ತದೆ. ನಂತರ, ಫುಟ್‌ಬಾಲ್ ಆಟಗಾರನು ಗೇಟ್ ನಿಂದ ಹೊರಡುತ್ತಿರುವುದನ್ನು ಕಾಣಬಹುದು.
ಹಾಸನ್ ಜೂನಿಯರ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ, ಫುಟ್ಬಾಲ್ ಆಟಗಾರನು ತನ್ನ ತಂಡಕ್ಕೆ ಕಾರ್ನರ್ ಕಿಕ್ ಸಿಕ್ಕಿತು ಮತ್ತು ಅವನು ತನ್ನ ಸ್ಥಾನವನ್ನು ಪಡೆದುಕೊಳ್ಳಲು ಮುಂದಾದಾಗ, ಪ್ರೇಕ್ಷಕರು ತನ್ನನ್ನು ಜನಾಂಗೀಯ ನಿಂದನೆ ಮಾಡಿದರು. ಗುಂಪು ತನ್ನ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದೂ ಆರೋಪಿಸಿದ್ದಾರೆ.
ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.