ಧೋವಲ್ ಭೇಟಿ ನಂತರ ಜಮ್ಮು-ಕಾಶ್ಮೀರಕ್ಕೆ 10 ಸಾವಿರ ಅರೆಸೇನಾಪಡೆ ರವಾನೆ
Team Udayavani, Jul 27, 2019, 6:01 PM IST
ಶ್ರೀನಗರ್/ನವದೆಹಲಿ:ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಮ್ಮು-ಕಾಶ್ಮೀರಕ್ಕೆ 10ಸಾವಿರ ಅರೆಸೇನಾಪಡೆ ಯೋಧರನ್ನು ಕಳುಹಿಸಲು ಆದೇಶ ನೀಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ತುರ್ತಾಗಿ ಜಮ್ಮು-ಕಾಶ್ಮೀರಕ್ಕೆ ಸಿಎಆರ್ ಪಿಎಫ್ ನ 100ಕಂಪನಿ ಟ್ರೂಪ್ ಅನ್ನು(10ಸಾವಿರ) ಕಳುಹಿಸಿಕೊಡಬೇಕೆಂದು ಜುಲೈ 25ರಂದು ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿತ್ತು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರ ಕಣಿವೆಗೆ ಎರಡು ದಿನಗಳ ಕಾಲ ಭೇಟಿ ನೀಡಿ ವಾಪಸ್ ಆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮೂಲಗಳ ಪ್ರಕಾರ, ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದ ಕಾನೂನು-ಸುವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿರುವ ದೋವಲ್ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ನೀಡಿರುವುದಾಗಿ ತಿಳಿಸಿದೆ.
ಉತ್ತರ ಕಾಶ್ಮೀರದಲ್ಲಿ ಅರೆಸೇನಾಪಡೆಯ ಸಂಖ್ಯೆ ಕಡಿಮೆ ಇದ್ದು, ಈಗಾಗಲೇ ಹೆಚ್ಚುವರಿ ಅರೆಸೇನಾಪಡೆಯನ್ನು ಏರ್ ಲಿಫ್ಟ್ ಮಾಡಲಾಗಿದೆ ಎಂದು ದಿಲ್ಭಾಗ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.