Amarnath Yatra ಬಳಿಕ ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ
Team Udayavani, Jul 6, 2024, 6:18 AM IST
ಹೊಸದಿಲ್ಲಿ: ಅಮರನಾಥ ಯಾತ್ರೆ ಮುಗಿದ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಯಾತ್ರೆ ಆ.19 ರಂದು ಮುಕ್ತಾಯಗೊಳ್ಳಲಿದೆ. ಸುಪ್ರೀಂ ಕೋರ್ಟ್ ಕೂಡ ಸೆಪ್ಟಂಬರ್ ಒಳಗೇ ಚುನಾವಣೆ ನಡೆಸುವಂತೆ ಕೇಂದ್ರಕ್ಕೆ ಸೂಚಿಸಿತ್ತು. 2019ರಲ್ಲಿ ವಿಶೇಷ ಸ್ಥಾನ ಮಾನ ರದ್ದುಗೊಂಡ ಬಳಿಕ ನಡೆಯಲಿರುವ ಮೊದಲ ಚುನಾವಣೆ ಇದಾಗಿದೆ. ಈ ಮಧ್ಯೆ ಬುಧವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ- ಸಚಿವ ಜೆ.ಪಿ.ನಡ್ಡಾ ಸಭೆ ನಡೆಸಿ, 90 ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ಸ್ಪರ್ಧಿಸಲಿದೆ. ಈ ಕುರಿತು ಸಿದ್ಧತೆ ನಡೆಸುವಂತೆ ರಾಜ್ಯ ನಾಯಕರಿಗೆ ನಿರ್ದೇಶನ ನೀಡಿದ್ದಾರೆ. ಚುನಾವಣೆ ಪೂರ್ವ ಯಾವ ಪಕ್ಷದೊಂದಿಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ. ಹಾಗಿದ್ದೂ, “ಸಮಾನ ಮನಸ್ಕ ಪಕ್ಷ’ಗಳೊಂದಿಗೆ “ಸೀಟು ಹೊಂದಾಣಿಕೆ ಮತ್ತು ಚುನಾವಣ ಒಪ್ಪಂದ ಮಾಡಿಕೊಳ್ಳಬಹುದು ಎಂದು ಬಿಜೆಪಿ ರಾಷ್ಟ್ರೀಯ ನಾಯಕತ್ವ ತಿಳಿಸಿದೆ ಎನ್ನಲಾಗಿದೆ.
ಇದೇ ವೇಳೆ ಶನಿವಾರ ನಡ್ಡಾ ಕಣಿವೆಗೆ ಭೇಟಿ ನೀಡಿ, ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.