ರಾಹುಲ್ ಟಿ-ಶರ್ಟ್ ಬೆಲೆ ಹೇಳಿದ ಬಿಜೆಪಿಗೆ ಮೋದಿ ಸೂಟ್ ನೋಡಿ ಎಂದು ಕಾಂಗ್ರೆಸ್ ತಿರುಗೇಟು
Team Udayavani, Sep 9, 2022, 5:31 PM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯ ವೇಳೆ 41 ಸಾವಿರ ರೂ. ಬೆಲೆಯ ಟೀ ಶರ್ಟ್ ಧರಿಸಿದ್ದಾರೆಂದು ಬಿಜೆಪಿ ಟೀಕೆ ಮಾಡಿದೆ. ಆದರೆ ಕಾಂಗ್ರೆಸ್ ಮರು ಟೀಕೆ ಮಾಡಿದ್ದು, ದುಬಾರಿ ಬಟ್ಟೆಯ ವಿಚಾರದಲ್ಲಿ ಬಿಜೆಪಿಗೆ ತಿರುಗೇಟು ನೀಡಿದೆ.
ಬಿಜೆಪಿಯು ಟೀ ಶರ್ಟ್ ಮತ್ತು ರಾಹುಲ್ ಗಾಂಧಿಯವರ ಚಿತ್ರವನ್ನು ಹಂಚಿಕೊಂಡಿದ್ದು, “ಭಾರತ್, ದೇಖೋ” ಎಂಬ ಶೀರ್ಷಿಕೆಯೊಂದಿಗೆ ಟಿ-ಶರ್ಟ್‌ನ ಬೆಲೆಯನ್ನು ಪೋಸ್ಟ್ ಮಾಡಿದೆ.
ಇದನ್ನೂ ಓದಿ:ಹನಿ ಸಿಂಗ್ – ಶಾಲಿನಿ ತಲ್ವಾರ್ ವಿಚ್ಚೇದನ: ಒಂದು ಕೋಟಿ ರೂ ಜೀವನಾಂಶ ನೀಡಿದ ಸಿಂಗರ್
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕನ್ಯಾಕುಮಾರಿಯಿಂದ ಯಾತ್ರೆ ಆರಂಭವಾಗಿದ್ದು, ಶ್ರೀನಗರದವರೆಗೆ ಸಾಗಲಿದೆ.
Bharat, dekho! pic.twitter.com/UzBy6LL1pH
— BJP (@BJP4India) September 9, 2022
ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಲಕ್ಷದ ಸೂಟ್ ಧರಿಸಿದ್ದರು ಎಂದಿದೆ.
“ನೀವು ಹೆದರಿದಿರಾ? ‘ಭಾರತ್ ಜೋಡೋ ಯಾತ್ರೆಯಲ್ಲಿ ನೆರೆದಿದ್ದ ಜನಸಮೂಹವನ್ನು ನೋಡಿ ಹೆದರಿಕೆಯಾಯ್ತಾ? ಸಮಸ್ಯೆಯ ಬಗ್ಗೆ ಮಾತನಾಡಿ. ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಮಾತನಾಡಿ. ನಾವು ಬಟ್ಟೆಯ ಬಗ್ಗೆ ಚರ್ಚಿಸಲು ಆರಂಭಿಸಿದರೆ, ಮೋದಿ ಜಿ ಅವರ 10 ಲಕ್ಷ ಬೆಲೆಯ ಸೂಟ್ ಮತ್ತು 1.5 ಲಕ್ಷ ರೂ. ಬೆಲೆಯ ಕನ್ನಡಕದ ಬಗ್ಗೆಯೂ ಮಾತನಾಡಬೇಕಾಗುತ್ತದೆ, ”ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
अरे… घबरा गए क्या? भारत जोड़ो यात्रा में उमड़े जनसैलाब को देखकर।
मुद्दे की बात करो… बेरोजगारी और महंगाई पर बोलो।
बाकी कपड़ों पर चर्चा करनी है तो मोदी जी के 10 लाख के सूट और 1.5 लाख के चश्मे तक बात जाएगी।
बताओ करनी है? @BJP4India https://t.co/tha3pm9RYc
— Congress (@INCIndia) September 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.