ವಿಮಾನ ವಿಳಂಬ: ಕೇಂದ್ರ ಸಚಿವರಿಗೆ ಜನರ ತರಾಟೆ
Team Udayavani, Dec 15, 2017, 6:20 AM IST
ನವದೆಹಲಿ: ಏರ್ ಇಂಡಿಯಾ ವಿಮಾನ ಟೇಕಾಫ್ ಮಾಡಲು ತಡವಾದ ಕಾರಣ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರಿಗೆ ಪ್ರಯಾಣಿಕರೇ ಬೆವರಿಳಿಸಿದ ಘಟನೆ ಬುಧವಾರ ನಡೆದಿದೆ. ಉತ್ತರಿಸಲಾಗದೇ ತಡವರಿಸಿದ ಸಚಿವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಪೈಲಟ್ ಹಾಗೂ ಸಹ ಪೈಲಟ್ರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮುಂಜಾನೆ 6 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಿಂದ ವಿಮಾನ ವಿಜಯವಾಡಕ್ಕೆ ಪ್ರಯಾಣಿಸಬೇಕಿತ್ತು. ಆದರೆ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನಯಾನ ನಿರ್ವಹಣಾ ವಿಭಾಗವು ಕೆಲ ಸಮಯ ಕಾಯುವಂತೆ ಪೈಲೆಟ್ಗೆ ನಿರ್ದೇಶನ ನೀಡಿತ್ತು. ಆದರೆ ಇದು ಕೆಳಹಂತದ ಸಿಬ್ಬಂದಿಗೆ ಗೊತ್ತಿರಲಿಲ್ಲ. ಹೀಗಾಗಿ ಸಿಬ್ಬಂದಿ 125 ಮಂದಿ ಪ್ರಯಾಣಿಕರನ್ನು ನಿಗದಿತ ಸಮಯಕ್ಕೆ ವಿಮಾನದೊಳಕ್ಕೆ ಕುಳಿತುಕೊಳ್ಳುವಂತೆ ಹೇಳಲಾಗಿತ್ತು. ಇವರಲ್ಲಿ ಸಚಿವ ಅಶೋಕ್ ಗಜಪತಿ ಕೂಡ ಇದ್ದರು. ಹೀಗಾಗಿ ಪ್ರಯಾಣಿಕರ ಆಕ್ರೋಶವನ್ನು ಸಚಿವರು ಜತೆ ಇದ್ದೇ ಎದುರಿಸುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.