ಪ್ರವಾಹದ ಬಳಿಕ ಇಲಿ ಜ್ವರ!
Team Udayavani, Sep 1, 2018, 6:00 AM IST
ತಿರುವನಂತಪುರಂ: ಪ್ರವಾಹದ ಭೀಕರತೆಯಿಂದ ಸಾವರಿಸಿಕೊಳ್ಳುತ್ತಿದ್ದಂತೆಯೇ ಕೇರಳದಲ್ಲಿ ಈಗ ಇಲಿ ಜ್ವರ ಜನರ ಜೀವನದ ಜೊತೆ ಚೆಲ್ಲಾಟ ಆರಂಭಿಸಿದೆ. ಕಳೆದ 3 ದಿನಗಳಲ್ಲಿ 12 ಜನರು ಇಲಿ ಜ್ವರದಿಂದ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ.28 ರಂದೇ ರಾಜ್ಯ ಆರೋಗ್ಯ ಇಲಾಖೆ ಈ ಸಂಬಂಧ ಸೂಚನೆ ಹೊರಡಿಸಿದ್ದು, ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರೂ ಅದನ್ನು ಮೊದಲು ಇಲಿ ಜ್ವರವೇ ಎಂಬುದಾಗಿ ಪರಿಶೀಲಿಸಬೇಕು ಎಂದು ಸೂಚಿಸಿದೆ. ಆರೋಗ್ಯ ಇಲಾಖೆ ಈ ಸೂಚನೆ ಹೊರಡಿಸುತ್ತಿದ್ದಂತೆಯೇ ಆತಂಕ ಜನರಲ್ಲಿ ಮನೆ ಮಾಡಿದೆ.
ಲೆಪ್ಟೋಸ್ಪಿರೋಸಿಸ್ ಎಂದು ಕರೆಯಲಾಗುವ ಈ ರೋಗ ತ್ರಿಶೂರ್, ಪಾಲಕ್ಕಾಡ್, ಕಲ್ಲಿಕೋಟೆ, ಮಳಪ್ಪುರಂ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು, ಕಲುಷಿತಗೊಂಡ ನೀರು ಸೇವನೆಯಿಂದ ಹರಡಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಸಾಮಾನ್ಯವಾಗಿ ಪ್ರಾಣಿಯಿಂದ ಮನುಷ್ಯನಿಗೆ ನೀರಿನ ಮೂಲಕ ಹರಡುತ್ತದೆ. 20 ವರ್ಷಗಳ ಹಿಂದೆ ಕೂಡ ಇಲಿ ಜ್ವರ ವ್ಯಾಪಕವಾಗಿ ಹರಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.