ಮತ್ತೆ ಪ್ರತಿಮೆ ಧ್ವಂಸ; ಪ್ರಧಾನಿ ಮೋದಿ ಆಕ್ರೋಶ
Team Udayavani, Mar 8, 2018, 1:24 AM IST
ಹೊಸದಿಲ್ಲಿ/ಕೋಲ್ಕತಾ: ತ್ರಿಪುರದಲ್ಲಿ ಲೆನಿನ್ ಪ್ರತಿಮೆ ಧ್ವಂಸದಿಂದ ಶುರುವಾದ ಸರಣಿ ಬುಧವಾರವೂ ಮುಂದುವರಿದಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಇಂಥ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅಂಥವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಿಗೇ ಪ್ರಕರಣ “ಧ್ವಂಸ ರಾಜಕಾರಣ’ವಾಗಿ ತಿರುವು ಪಡೆದುಕೊಳ್ಳುತ್ತಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜತೆ ಮಾತುಕತೆ ನಡೆಸಿರುವ ಪ್ರಧಾನಿ ಮೋದಿ, ಇಂಥ ಕುಕೃತ್ಯಗಳ ಬಗ್ಗೆ ಅಸ ಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ, ಪ್ರತಿಮೆ ಧ್ವಂಸ ಕುರಿತಂತೆ, ರಾಜ್ಯ ಸರಕಾರಗಳಿಗೆ ಸ್ಪಷ್ಟ ನಿರ್ದೇ ಶನ ನೀಡಿರುವ ಕೇಂದ್ರ ಗೃಹ ಇಲಾಖೆ, ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಮುಖರ್ಜಿ ಪುತ್ಥಳಿ ಧ್ವಂಸ: ಇದೇ ವೇಳೆ ಪ್ರತಿಮೆ ಧ್ವಂಸ ಪ್ರಕರಣಗಳು ಬುಧವಾರವೂ ನಡೆದಿವೆ. ದಕ್ಷಿಣ ಕೋಲ್ಕತಾದಲ್ಲಿ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಎಡಪಕ್ಷಗಳ ಯುವ ವಿಭಾಗದ ಮಹಿಳಾ ನಾಯಕಿ ಸಹಿತ ಏಳು ಮಂದಿಯನ್ನು ಬಂಧಿಸ ಲಾಗಿದೆ. ಇದೇ ವೇಳೆ ಉತ್ತರ ಪ್ರದೇಶದ ಮೀರತ್ನಲ್ಲಿ ಸಂವಿಧಾನಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ದಲಿತ ಸಮುದಾಯದವರು ಮೀರತ್-ಮಾವಾನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯಗಳಿಗೆ ಎರಡು ಸುತ್ತೋಲೆ
ಪ್ರತಿಮೆಗಳ ಧ್ವಂಸ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಇಲಾಖೆ, ಬುಧವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಎರಡೆರಡು ಸುತ್ತೋಲೆಗಳನ್ನು ಕಳುಹಿಸಿದೆ. ಮೊದಲ ಸುತ್ತೋಲೆಯಲ್ಲಿ, ಯಾವುದೇ ಪ್ರತಿಮೆ ಧ್ವಂಸ ಪ್ರಕರಣ ಗಮನಕ್ಕೆ ಬಂದ ಕೂಡಲೇ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಈ ಸುತ್ತೋಲೆ ಬಂದ ಕೆಲವೇ ಗಂಟೆಗಳಲ್ಲಿ ಮತ್ತೂಂದು ಸುತ್ತೋಲೆ ಕಳುಹಿಸಿರುವ ಇಲಾಖೆ, ಯಾವ ಜಿಲ್ಲೆಗಳಲ್ಲಿ ಪ್ರತಿಮೆಗಳು ಧ್ವಂಸಗೊಳ್ಳುತ್ತವೋ ಆ ಪ್ರಕರಣಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಬೇಕೆಂದು ಸೂಚಿಸಿದೆ. ತ್ರಿಪುರದಲ್ಲಿನ ಘಟನೆಗೆ ಸಂಬಂಧಿಸಿದಂತೆ 11 ಕೇಸುಗಳನ್ನು ದಾಖಲಿಸಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.