ಮೋದಿ ಟೀ ಮಾರುವುದಕ್ಕಷ್ಟೇ ಲಾಯಕ್ಕು ಎಂದಿದ್ದ ಅಯ್ಯರ್‌ ಈಗೇನಂತಾರೆ?


Team Udayavani, Mar 16, 2017, 4:40 PM IST

Mani Shanker Aiyer-700.jpg

ಹೊಸದಿಲ್ಲಿ : 2014ರ ಲೋಕಸಭಾ ಚುನಾವಣೆಯ ವೇಳೆ “ಮೋದಿ ಟೀ ಮಾರುವುದಕ್ಕಷ್ಟೇ ಲಾಯಕ್ಕು’ ಎಂದಿದ್ದ ಕಾಂಗ್ರೆಸ್‌ನ ಮಾಜಿ ಕೇಂದ್ರ ಸಚಿವ ಮಣಿ ಶಂಕರ್‌ ಅಯ್ಯರ್‌ ಅವರು ಈಗ ತಮ್ಮ ರಾಗವನ್ನು ಬದಲಾಯಿಸಿದ್ದಾರೆ. “ಮೋದಿಯನ್ನು ಯಾವುದೇ ಒಬ್ಬ ವ್ಯಕ್ತಿಯಿಂದ ಸೋಲಿಸಲಾಗದು; ಎಲ್ಲರೂ ಒಗ್ಗೂಡಿ ಹೋರಾಡಿದರೆ ಮಾತ್ರವೇ ಮೋದಿಯನ್ನು ಸೋಲಿಸಲು ಸಾಧ್ಯ. 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಮತ್ತು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಅಂತಹ ಒಂದು ಸಂಘಟಿತ ಕಾರ್ಯತಂತ್ರವನ್ನು ರೂಪಿಸುವುದು ಅಗತ್ಯ’ ಎಂದು ಹೇಳಿದ್ದಾರೆ.

2014ರಲ್ಲಿ ನರೇಂದ್ರ ಮೋದಿ ಅವರ ಪ್ರಧಾನಿ ಆಕಾಂಕ್ಷೆಯನ್ನು ಲೇವಡಿ ಮಾಡಿದ್ದ ಮಣಿಶಂಕರ್‌ ಅಯ್ಯರ್‌, “21ನೇ ಶತಮಾನದಲ್ಲಿ ಮೋದಿ ಭಾರತದ ಪ್ರಧಾನಿಯಾಗುವುದು ಸಾಧ್ಯವೇ ಇಲ್ಲ ಎಂಬ ವಿಶ್ವಾಸವನ್ನು ನಾನು ನಿಮಗೆ ಕೊಡುತ್ತೇನೆ. ಒಂದು ವೇಳೆ ಮೋದಿ ಸಂಸತ್ತಿನಲ್ಲಿ ಟೀ ವಿತರಿಸಲು ಬಯಸಿದರೆ ಅವರಿಗೆ ಅಲ್ಲಿ ನಾವು ಜಾಗ  ಕೊಡಬಹುದಾಗಿದೆ’ ಎಂದು ಹೇಳಿದ್ದರು. 

2014ರ ಲೋಕಸಭಾ ಚುನಾವಣೆಯನ್ನು ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಗೆದ್ದ ಪರಿಣಾಮವಾಗಿ ಮೋದಿ ಪ್ರಧಾನಿಯಾದರು; ಅಲ್ಲಿಯ ಬಳಿಕ ಮೋದಿ ಶಕ್ತಿ ವರ್ಧಿಸುತ್ತಲೇ ಬಂದಿದ್ದು ಈಚಿನ ಪಂಚ ರಾಜ್ಯ ಚುನಾವಣೆಗಳಲ್ಲಿ  ಬಿಜೆಪಿ, ಮೋದಿ ಬಲದಲ್ಲಿ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿ 325 ಸೀಟುಗಳನ್ನು ಗೆದ್ದುಕೊಂಡಿದೆ.

ಇಂದು ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ ಕಾಂಗ್ರೆಸ್‌ ಹಿರಿಯ ನಾಯಕ, ಚಿಂತಕ, ಮುತ್ಸದ್ದಿ ಮಣಿಶಂಕರ್‌ ಅಯ್ಯರ್‌ ಹೇಳಿದ ಮಾತುಗಳು ಹೀಗಿವೆ :

* ಪ್ರಧಾನಿ ಮೋದಿಯನ್ನು ಮತ್ತು ಅವರ ಬಿಜೆಪಿಯನ್ನು ಸೋಲಿಸಲು ಸಂಘಟಿತ ಯತ್ನ ಬೇಕು; ಒಬ್ಬ ವ್ಯಕ್ತಿ – ಒಂದು ಪಕ್ಷದಿಂದ ಅದು ಅಸಾಧ್ಯ.

* ಪ್ರಬಲ ಪ್ರಾದೇಶಿಕ ನಾಯಕನಿದ್ದರೆ ಕಾಂಗ್ರೆಸ್‌ ಗೆಲ್ಲಬಹುದು ಎಂಬುದನ್ನು ಪಂಜಾಬ್‌ ತೋರಿಸಿಕೊಟ್ಟಿದೆ. ಹಾಗಾಗಿ ಕಾಂಗ್ರೆಸ್‌ ಪಕ್ಷ ಬಲಿಷ್ಠ ಪ್ರಾದೇಶಿಕ ನಾಯಕರನ್ನು ರೂಪಿಸಬೇಕು.

* ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಯನ್ನು ಯಾರೂ ಬದಲಾಯಿಸಲಾರರು; ಆದರೆ ಕಾಂಗ್ರೆಸ್‌ ಪಕ್ಷಕ್ಕೆ ಯುವ ನಾಯಕರು ಬೇಕು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.