ಏಳು ವರ್ಷಗಳ ಬಳಿಕ ಕೊಲೆ ಆಗಿದ್ದ ಮಹಿಳೆ ಪತ್ತೆ!
Team Udayavani, Dec 8, 2022, 6:40 AM IST
ಲಕ್ನೋ: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ.
2015ರಲ್ಲಿ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಅಲೀಗಢ ಜಿಲ್ಲೆಯ ಗೊಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆಕೆಯ ತಂದೆ ದೂರು ನೀಡಿದ್ದರು.
ಕೆಲವು ದಿನಗಳ ಅನಂತರ ಆಗ್ರಾದಲ್ಲಿ ಬಾಲಕಿ ಯೊಬ್ಬಳ ಶವ ದೊರೆತಿತ್ತು. ಇದು ತನ್ನದೇ ಮಗಳ ದೇಹ ಎಂದು ದೂರುದಾರರು ಗುರುತಿ ಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ವಿಷ್ಣು ಎಂಬಾತನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದರು. ಆದರೆ ವಿಷ್ಣು ತಾಯಿಗೆ ಪೊಲೀಸರ ತನಿಖೆ ಯಲ್ಲಿ ನಂಬಿಕೆ ಬರಲಿಲ್ಲ. ಆಕೆ ಸ್ವತಃ ಬಾಲಕಿಯ ಪತ್ತೆಗೆ ಮುಂದಾದರು.
ಕೆಲವು ದಿನಗಳ ಹಿಂದೆ ಆಕೆಯನ್ನು ಹತ್ರಾಸ್‌ನಲ್ಲಿ ಕಂಡ ವಿಷ್ಣು ತಾಯಿ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ಪತ್ತೆಯಾದ ಮಹಿಳೆಯನ್ನು ಕರೆತಂದಿದ್ದು, ಆಕೆಯ ಡಿಎನ್‌ಎ ಪರೀಕ್ಷೆಗೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪರೀಕ್ಷೆಯ ಫಲಿತಾಂಶವು ಆರೋಪಿ ವಿಷ್ಣು ಭವಿಷ್ಯವನ್ನು ನಿರ್ಧರಿಸಲಿದೆ. ಆತ ಕಳೆದ 7 ವರ್ಷಗಳಿಂದ ಜೈಲಿನಲ್ಲಿ ಶಿಕ್ಷೆ ಅನುಭವಿ ಸುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.