ಮತ್ತೆ ಸಿಧು ಪಾಕ್ ವಿವಾದ
Team Udayavani, Oct 14, 2018, 6:00 AM IST
ಹೊಸದಿಲ್ಲಿ: ಪಾಕ್ ಮೇಲೆ ತಮಗಿರುವ ಪ್ರೀತಿ ವ್ಯಕ್ತಪಡಿಸುವ ಭರದಲ್ಲಿ ದಕ್ಷಿಣ ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೊಸ ವಿವಾದ ಸೃಷ್ಟಿಸಿದ್ದಾರೆ. ದಕ್ಷಿಣ ಭಾರತಕ್ಕೆ ಹೋಗುವುದಕ್ಕಿಂತ ಪಾಕಿಸ್ಥಾನಕ್ಕೆ ಹೋಗುವುದೇ ಉತ್ತಮ ಎಂಬ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದಿದ್ದು, ದಕ್ಷಿಣ ಭಾರತ ವರ್ಸಸ್ ಉತ್ತರ ಭಾರತ ಎಂಬ ಜಗಳವನ್ನು ಹುಟ್ಟುಹಾಕಲಿದೆಯೇ ಎಂಬ ಅನುಮಾನ ಮೂಡಿದೆ.
ಶನಿವಾರ ಹಿಮಾಚಲಪ್ರದೇಶದಲ್ಲಿ ನಡೆದ ಕಸೌಲಿ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿಧು, ದಕ್ಷಿಣ ಭಾರತದಲ್ಲಿ ಭಾಷೆ ಹಾಗೂ ಆಹಾರದ್ದೇ ದೊಡ್ಡ ಸಮಸ್ಯೆ. ಅಲ್ಲಿಗೆ ಹೋದರೆ ಅಲ್ಲಿನ ಒಂದು ಪದವೂ ನನಗೆ ಅರ್ಥವಾಗುವುದಿಲ್ಲ. ಇಡ್ಲಿಯಂಥ ಆಹಾರವನ್ನು ಸ್ವಲ್ಪಮಟ್ಟಿಗೆ ಸೇವಿಸುತ್ತೇನೆ. ಆದರೆ ಹೆಚ್ಚು ದಿನ ಅದನ್ನೇ ತಿನ್ನುತ್ತಿರಲು ನನ್ನಿಂದ ಸಾಧ್ಯವಿಲ್ಲ. ಅಲ್ಲಿನ ಸಂಸ್ಕೃತಿ ಸಂಪೂರ್ಣ ಭಿನ್ನ. ಆದರೆ ಪಾಕಿಸ್ಥಾನಕ್ಕೆ ಹೋದರೆ ಅಲ್ಲಿನ ಜನ ಪಂಜಾಬಿ ಮತ್ತು ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಅವರೊಂದಿಗೆ ಬೆರೆಯುವುದೂ ನನಗೆ ತುಂಬಾ ಸುಲಭ. ಅಲ್ಲಿ ಸಂಚರಿಸುವುದೇ ಒಂದು ಅದ್ಭುತ ಅನುಭವ. ಹೀಗಾಗಿ ದಕ್ಷಿಣ ಭಾರತಕ್ಕಿಂತ ಪಾಕಿಸ್ಥಾನಕ್ಕೆ ಹೋಗುವುದು ನನಗೆ ಹೆಚ್ಚು ಸೂಕ್ತವೆನಿಸುತ್ತದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇಜ್ ಬಜ್ವಾರನ್ನು ಆಲಿಂಗಿಸಿದ್ದನ್ನೂ ಸಮರ್ಥಿಸಿಕೊಂಡಿದ್ದಾರೆ.
ಪಾಕ್‌ಗೆ ಹೋಗಲಿ ಸಿಧು ಅವರ “ದಕ್ಷಿಣ ಭಾರತ – ಪಾಕಿಸ್ಥಾನ’ ಹೇಳಿಕೆಗೆ ವಿವಿಧ ರಾಜಕೀಯ ಪಕ್ಷಗಳು ಕಿಡಿಕಾರಿವೆ. ಸಿಧು ಅವರು ಈಗ ಪಾಕಿಸ್ಥಾನಿ ಸಮರ್ಥಕರಾಗಿ ಬದಲಾಗಿದ್ದಾರೆ ಎಂದು ಪಂಜಾಬ್‌ನ ಅಕಾಲಿ ದಳದ ಹಿರಿಯ ನಾಯಕರೊಬ್ಬರು ತಿವಿದಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ನಾಯಕರೊಬ್ಬರು ಮಾತನಾಡಿ, ದ.ಭಾರತಕ್ಕಿಂತ ಪಾಕಿಸ್ಥಾನವೇ ಇಷ್ಟವೆಂದಾದರೆ ಅಲ್ಲಿಗೇ ಹೋಗಲಿ ಎಂದಿದ್ದಾರೆ. ಸಿಧು ಪಾಕ್ ಪ್ರೀತಿ ಬಗ್ಗೆ ಪ್ರಶ್ನೆ ಮಾಡಿದ ಬಿಜೆಪಿ, ಅವರ ಹೇಳಿಕೆ ಆಕ್ಷೇಪಾರ್ಹ ಎಂದಿದೆ.
ಪಾಕ್‌ನೊಂದಿಗೆ ದ. ಭಾರತವನ್ನು ಹೋಲಿಕೆ ಮಾಡುವುದು ಸರಿಯಲ್ಲ; ಮಾತ್ರವಲ್ಲ ಅದು ಖಂಡನಾರ್ಹ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ನಳಿನ್ ಕೊಹ್ಲಿ ಹೇಳಿದ್ದಾರೆ. ಇದರಲ್ಲೇನೂ ವಿಶೇಷವಿಲ್ಲ. ಸುದ್ದಿಯಲ್ಲಿರಬೇಕೆಂದು ಸಿಧು ಹೀಗೆಲ್ಲ ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಇನ್ನು ಕಾಂಗ್ರೆಸ್ ವಿವಾದವನ್ನು ತೇಲಿಬಿಡುವ ಯತ್ನಕ್ಕೆ ಕೈಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.