ಅಗ್ನಿವೀರರನ್ನು ಸೇನೆಯಲ್ಲಿ ಉಳಿಸಿಕೊಳ್ಳಲು ವ್ಯವಸ್ಥೆ ಜಾರಿಗೆ
ಕಾರ್ಯಕ್ಷಮತೆಯೇ ಅಳತೆಗೋಲು
Team Udayavani, Jan 12, 2023, 7:46 AM IST
ಹೊಸದಿಲ್ಲಿ: ಅಗ್ನಿವೀರರನ್ನು 4 ವರ್ಷಗಳ ಬಳಿಕವೂ ಸೇನೆಯಲ್ಲಿ ಉಳಿಸಿಕೊಳ್ಳುವ ಬಗ್ಗೆ ಭಾರತೀಯ ಸೇನೆಯು ಸಮಗ್ರ ಮೌಲ್ಯಮಾಪನ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಕಾರ್ಯಾಚರಣೆ ಕ್ಷಮತೆ, ಆಯುಧಗಳ ಬಳಕೆಯಲ್ಲಿ ಪರಿಣತಿ, ದೈಹಿಕ ಸಾಮರ್ಥ್ಯ ಹಾಗೂ ಇತರ ಸಮರ ಕೌಶಲಗಳ ಮೌಲ್ಯಮಾಪನ ಸೇರಿದಂತೆ ಕಾರ್ಯಕ್ಷಮತೆ ಆಧರಿಸಿದ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಗ್ನಿವೀರರನ್ನು ಮುಂದಿನ 15 ವರ್ಷಗಳ ಕಾಲ ಸೇವೆಯಲ್ಲಿ ಮುಂದುವರಿಸಲು ಸೇನೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷೆಯ ಪೈಕಿ ಶೇ.39ರಷ್ಟು ಕಾರ್ಯಾಚರಣೆ ಸಾಮರ್ಥ್ಯ, ಶೇ.36ರಷ್ಟು ದೈಹಿಕ ದೃಢತೆ, ಶೇ.25ರಷ್ಟು ಲಿಖೀತ ಮತ್ತು ಪ್ರಾಯೋಗಿಕ ಪರೀಕ್ಷೆ ಇರಲಿದೆ. ಅಗ್ನಿವೀರರಿಗೆ ಶೌರ್ಯ ಪ್ರಶಸ್ತಿ ದೊರಕಿದಲ್ಲಿ ಅಂಥವರನ್ನು ಮುಂದುವರಿಸಲು ಅನುಕೂಲವಾಗಲಿದೆ. ಅಶಿಸ್ತು ತೋರಿದರೆ ಋಣಾತ್ಮಕ ಅಂಕಗಳೂ ಇರಲಿವೆ. 2022ರ ಜುಲೈನಲ್ಲಿ ಜಾರಿಗೆ ಬಂದ ಅಗ್ನಿಪಥ ಯೋಜನೆಯ ಅನ್ವಯ 4 ವರ್ಷಗಳ ಬಳಿಕ ಶೇ.25ರಷ್ಟು ಮಂದಿಯನ್ನು ಸೇನೆಯಲ್ಲಿ ಮುಂದುವರಿಸಲಾಗುತ್ತದೆ. ದೇಶದ ವಿವಿಧ ಸೇನಾ ತರಬೇತಿ ಕೇಂದ್ರ ಗಳಲ್ಲಿ ಮೊದಲ ತಂಡದ ಅಗ್ನಿವೀರರಿಗೆ ಜ.1ರಿಂದ ತರಬೇತಿ ಪ್ರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.