Agra; ತಾಜ್‌ಮಹಲ್‌ಗೆ ಗಂಗಾಜಲ ಪ್ರೋಕ್ಷಣೆ ಮಾಡಿದ ಇಬ್ಬರ ಬಂಧನ
Team Udayavani, Aug 4, 2024, 6:30 AM IST
ಆಗ್ರಾ: ತಾಜ್ ಮಹಲ್‌ನ ಒಳಗಿರುವ ಸಮಾಧಿಯ ಮೇಲೆ ಗಂಗಾಜಲ ಸಿಂಪಡಿಸಿದ ಘಟನೆ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಗಂಗಾಜಲವನ್ನು ತುಂಬಿಕೊಂಡು ಬಂದಿದ್ದ ಇಬ್ಬರು ವ್ಯಕ್ತಿಗಳು ತಾಜ್‌ಮಹಲ್‌ನ ನೆಲಮಾಳಿಗೆಗೆ ಸಂಪರ್ಕ ಕಲ್ಪಿಸುವ ಮೆಟ್ಟಿಲುಗಳ ಮೇಲೆ ಗಂಗಾಜಲ ಸಿಂಪಡಿಸಿ ವೀಡಿಯೋ ಮಾಡಿಕೊಂಡಿದ್ದಾರೆ.
ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರು ವ್ಯಕ್ತಿಗಳು ಬಲಪಂಥೀಯರಾಗಿದ್ದು, ತಾಜ್‌ಮಹಲ್ ಶಿವ ದೇವಾಲಯವಾಗಿದ್ದು, ಈ ಹಿನ್ನೆಲೆ ಯಲ್ಲಿ ಗಂಗಾ ಜಲ ಪ್ರೋಕ್ಷಣೆ ಮಾಡಿದ್ದೇವೆ ಎಂದು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ತಾಜ್‌ಮಹಲ್‌ನ ರಕ್ಷಣೆಯ ಹೊಣೆ ಹೊತ್ತಿರುವ ಸಿಐಎಸ್‌ಎಫ್ನ ಸಿಬಂದಿ ಈ ಇಬ್ಬರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.