Agra: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ
Team Udayavani, Jul 25, 2023, 11:03 AM IST
ಲಕ್ನೋ: ರಸ್ತೆಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹಳೆ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆದಿತ್ಯ ಮತ್ತು ಅವನ ಸ್ನೇಹಿತ ಅತುಸ್ ಬಂಧಿತ ಆರೋಪಿಗಳು.
ಘಟನೆ ಹಿನ್ನೆಲೆ: ಉತ್ತರ ಪ್ರದೇಶದ ಆಗ್ರಾದ ರಸ್ತೆಯಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೇಲೆ ಅದೇ ದಾರಿಯಲ್ಲಿ ಹೋಗುತ್ತಿದ್ದ ಆದಿತ್ಯ ಮತ್ತು ಅವನ ಸ್ನೇಹಿತ ಅತುಸ್ ವಿಕೃತಿ ಮೆರೆದಿದ್ದಾರೆ. ಆದಿತ್ಯ ವ್ಯಕ್ತಿಯ ತಲೆಗೆ ಒದಿದ್ದಾನೆ. ಆ ಬಳಿಕ ಆತನ ಮೇಲೆ ಮೂತ್ರವನ್ನು ಮಾಡಿದ್ದಾನೆ. ಈ ವೇಳೆ ವ್ಯಕ್ತಿ ಎಚ್ಚರಗೊಂಡು ಆರೋಪಿಗಳ ಕಾಲಿಗೆ ಬಿದ್ದು ಬಿಡಲು ಹೇಳಿದ್ದಾರೆ. ಈ ಇಡೀ ಘಟನೆಯ ವಿಡಿಯೋವನ್ನು ಆದಿತ್ಯನ ಸ್ನೇಹಿತ ಅತುಸ್ ಚಿತ್ರೀಕರಿಸಿದ್ದಾನೆ.
ಈ ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದ್ದು, ಈಗ ಇದರ ವಿಡಿಯೋ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಸಂತ್ರಸ್ತ ವ್ಯಕ್ತಿ ಯಾವ ದೂರನ್ನು ನೀಡಿಲ್ಲ. ಘಟನೆಯ ವಿಡಿಯೋ ವೈರಲ್ ಆದ ನಂತರ ಆದಿತ್ಯ ಮತ್ತು ಅತುಸ್ ಇಬ್ಬರನ್ನೂ ಸೋಮವಾರ ಬಂಧಿಸಲಾಯಿತು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆಗ್ರಾದ ಜಿಲ್ಲಾಧಿಕಾರಿ ಸೂರಜ್ ರೈ ಹೇಳಿದ್ದಾರೆ.
ಆರೋಪಿಗಳಲ್ಲಿ ಆದಿತ್ಯ ಕ್ರಿಮಿನಲ್ ಹಿನ್ನೆಲೆವುಳ್ಳವನಾಗಿದ್ದು, ಈ ಹಿಂದೆ ಹೋಟೆಲ್‌ನಲ್ಲಿ ವಿಧ್ವಂಸಕ ಪ್ರಕರಣಕ್ಕೆ ಸಂಬಂಧಿಸಿ ಆತನನ್ನು ಪೊಲೀಸರು ಬಂಧಿಸಿದ್ದರು.
ಟ್ವಿಟರ್ ನಲ್ಲಿ ಘಟನೆಯ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
Jammu Kashmir: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ
Drone; ಸ್ತ್ರೀ ಸಶಕ್ತೀಕರಣಕ್ಕೆ ನಮೋ ಡ್ರೋನ್ ದೀದಿಗೆ ಕೇಂದ್ರ ಸರಕಾರ ಚಾಲನೆ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.