Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Team Udayavani, Oct 6, 2024, 8:38 AM IST
ಆಗ್ರಾ: ಶಾಲಾ ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಬಳಸಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ನಾಲ್ವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ.
ಆಗ್ರಾ ನಿವಾಸಿಯಾಗಿರುವ ಶಿಕ್ಷಕಿ ಮಥುರಾದ ಶಾಲೆಯಲ್ಲಿ ಪಾಠ ಮಾಡುತ್ತಾರೆ. ಅಲ್ಲದೆ ಕಲಿಕೆಯಲ್ಲಿ ಹಿಂದಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಅವರು ಆಗ್ರಾದಲ್ಲಿ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ.
ವಿದ್ಯಾರ್ಥಿಯೊಬ್ಬ ಕಾಲಕ್ರಮೇಣ ಆಕೆಗೆ ಹತ್ತಿರವಾಗಿದ್ದ. ತನ್ನ ಮೊಬೈಲ್ ಫೋನ್ ನಿಂದ ಶಿಕ್ಷಕಿಯ ಅಶ್ಲೀಲ ವೀಡಿಯೊವನ್ನು ಮಾಡಿದ್ದಾನೆ. ಅಲ್ಲದೆ ನಂತರ ತನ್ನೊಂದಿಗೆ ಶಾರೀರಿಕ ಸಂಬಂಧ ಬೆಳೆಸುವಂತೆ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಕ್ಷಕಿ ಆತನಿಂದ ಅಂತರ ಕಾಯ್ದುಕೊಂಡ ಕಾರಣದಿಂದ ಅವನು ವಿಡಿಯೋವನ್ನು ಆತನ ಗ್ರಾಮದ ಮೂವರು ವಿದ್ಯಾರ್ಥಿಗಳಿಗೆ ಹಂಚಿದ್ದಾನೆ.
“ಶಿಕ್ಷಕಿ ವಿದ್ಯಾರ್ಥಿಯಿಂದ ಅಂತರ ಕಾಯ್ದುಕೊಳ್ಳಲು ಪ್ರಾರಂಭಿಸಿದಾಗ ಮತ್ತು ಆತನ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದಾಗ ವಿಷಯ ಹದಗೆಟ್ಟಿತು. ಇದರಿಂದ ಕೋಪಗೊಂಡ ವಿದ್ಯಾರ್ಥಿ ತನ್ನ ಗ್ರಾಮದ ಮೂವರು ಸ್ನೇಹಿತರಿಗೆ ಅಶ್ಲೀಲ ವೀಡಿಯೊವನ್ನು ಕಳುಹಿಸಿದನು” ಎಂದು ಆಗ್ರಾದ ಹಿರಿಯ ಪೊಲೀಸ್ ಅಧಿಕಾರಿ ಸೂರಜ್ ರೈ ಸುದ್ದಿಗಾರರಿಗೆ ತಿಳಿಸಿದರು.
ವಿದ್ಯಾರ್ಥಿಗಳು ವಾಟ್ಸಾಪ್ ನಲ್ಲಿ ಇನ್ನೂ ಹಲವರಿಗೆ ವಿಡಿಯೋ ಕಳುಹಿಸಿದ್ದಾರೆ. ಅಲ್ಲದೆ ಇನ್ಸ್ಟಾಗ್ರಾಮ್ ನಲ್ಲಿ ಪೇಜ್ ಕೂಡಾ ಆರಂಭಿಸಿದ್ದಾರೆ.
ಇದರಿಂದ ನೊಂದ ಶಿಕ್ಷಕಿಯು ಮಿಶನ್ ಶಕ್ತಿ ಅಭಿಯಾನ್ ಕೇಂದ್ರಕ್ಕೆ ತೆರಳಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ. ಕೇಂದ್ರದಲ್ಲಿ ಆಕೆಯನ್ನು ಸಂತೈಸಿದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.