ಕೃಷಿ ಸಾಲ: 12 ಲಕ್ಷ ಕೋಟಿ?
Team Udayavani, Jan 21, 2019, 12:50 AM IST
ಹೊಸದಿಲ್ಲಿ: ಫೆಬ್ರವರಿ 1 ರಂದು ಪ್ರಕಟಿಸಲಾಗುವ ಕೇಂದ್ರ ಬಜೆಟ್‌ನಲ್ಲಿ ಕೃಷಿ ಸಾಲ ನೀಡಿಕೆ ಗುರಿಯನ್ನು 12 ಲಕ್ಷ ಕೋಟಿ ರೂ.ಗೆ ಏರಿಕೆ ಮಾಡುವ ಸಾಧ್ಯತೆಯಿದೆ.
ಪ್ರಸ್ತುತ ವಿತ್ತ ವರ್ಷದಲ್ಲಿ 11 ಲಕ್ಷ ಕೋಟಿ ರೂ. ಮೀಸಲಿಡಲಾಗಿತ್ತು. ಪ್ರತಿ ವರ್ಷವೂ ಸರಕಾರವು ಕೃಷಿ ಸಾಲಕ್ಕೆ ಮೀಸಲಿಡುವ ಮೊತ್ತವನ್ನು ಹೆಚ್ಚಿಸುತ್ತಲೇ ಬಂದಿದೆ. ಅದೇ ರೀತಿ ಈ ವರ್ಷ ಕೂಡ ಶೇ. 10 ರಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. 2017-18ರಲ್ಲಿ 10 ಲಕ್ಷ ಕೋಟಿ ರೂ. ಮೀಸಲಿಡಲಾಗಿತ್ತು. ಅದರೆ ಸಾಲ ನೀಡಿಕೆ ಪ್ರಮಾಣವು 11.68 ಲಕ್ಷ ಕೋಟಿ ರೂ. ಆಗಿತ್ತು. ಪ್ರತಿ ವರ್ಷ ಸರಕಾರ ನಿಗದಿ ಮಾಡಿ ದ್ದಕ್ಕಿಂತ ಹೆಚ್ಚಿನ ಮೊತ್ತದ ಕೃಷಿ ಸಾಲ ನೀಡಲಾಗುತ್ತಿದೆ. ಕೃಷಿ ಉತ್ಪಾದಕತೆ ಹೆಚ್ಚಿ ಸಲು ಬೆಳೆ ಸಾಲ ಪ್ರಮುಖವಾದದ್ದಾಗಿದೆ. ಸದ್ಯ ಸರಕಾರವು ಶೇ. 5 ಬಡ್ಡಿ ರಿಯಾಯಿತಿ ನೀಡುತ್ತಿದ್ದು, 3 ಲಕ್ಷ ರೂ.ವರೆಗೆ ಶೇ.4 ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.