ಜಾರ್ಖಂಡ್ : ನಕ್ಸಲರಿಂದ ಬಿಜೆಪಿ ಕಛೇರಿ ಧ್ವಂಸ
Team Udayavani, May 3, 2019, 10:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಜಾರ್ಖಂಡ್: ಇಲ್ಲಿನ ಸರಾಯ್ ಖೇಲಾ ಜಿಲ್ಲೆಯ ಖರ್ಸ್ವಾನ್ ಎಂಬಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಕಛೇರಿಯನ್ನು ನಕ್ಸಲರು ಬಾಂಬ್ ನ್ಪೋಟಿಸಿ ಧ್ವಂಸಗೊಳಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈ ಭಾಗದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ನಕ್ಸಲರು ಈ ಕೃತ್ಯ ಎಸಗಿರಬಹುದೆಂದು ಸಂಶಯಿಸಲಾಗಿದೆ.
ಗುರುವಾರ ಮಧ್ಯರಾತ್ರಿ 12.30ರ ಸುಮಾರಿಗೆ ನಕ್ಸಲರು ಈ ನ್ಪೋಟವನ್ನು ನಡೆಸಿದ್ದಾರೆಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಖುಂಟಿ ಲೊಖಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವ ಜಾರ್ಖಂಡ್ ನ ಮಾಜೀ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಅರ್ಜುನ್ ಮುಂಡಾ ಅವರು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಿಗಾಗಿ ಈ ಕಛೇರಿಯನ್ನು ಬಳಸುತ್ತಿದ್ದರೆಂದು ತಿಳಿದುಬಂದಿದೆ.
ಅಮಿತ್ ಶಾ ಅವರು ಇಂದು ಜಾರ್ಖಂಡ್ ನ ಖುಂಟಿ, ಕೊಡೆರ್ಮಾ ಮತ್ತು ರಾಂಚಿ ಸೇರಿದಂತೆ ಹಲವು ಕಡೆ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಲಿದ್ದಾರೆ.
ಮಹಾರಾಷ್ಟ್ರದ ಗಢ್ ಚಿರೋಳಿಯಲ್ಲಿ ಸುಧಾರಿತ ನ್ಪೋಟಕಗಳನ್ನು ಬಳಸಿ ನಕ್ಸಲರು ಕ್ಯು.ಆರ್.ಟಿ. ಪಡೆಯ 16 ಪೊಲೀಸರನ್ನು ಬಲಿ ಪಡೆದ ಎರಡು ದಿನಗಳ ಬಳಿಕ ಜಾರ್ಖಂಡ್ ನಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.