ರಸ್ತೆ ಅಪಘಾತದಲ್ಲಿ AIADMK ಸಂಸದ ರಾಜೇಂದ್ರನ್ ಮೃತ್ಯು
Team Udayavani, Feb 23, 2019, 4:19 AM IST
ಚೆನ್ನೈ: ಎ.ಐ.ಎ.ಡಿ.ಎಂ.ಕೆ. ಪಕ್ಷದ ನಾಯಕ ಹಾಗೂ ವಿಲ್ಲುಪುರಂ ಕ್ಷೇತ್ರದ ಸಂಸದ ಎಸ್. ರಾಜೇಂದ್ರನ್ ಅವರು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಟಿಂಡಿವಣಂ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 62 ವರ್ಷ ಪ್ರಾಯದ ರಾಜೇಂದ್ರನ್ ಅವರು ಪಿ.ಎಂ.ಕೆ. ಪಕ್ಷದ ರಾಮ್ ದಾಸ್ ಅವರು ತೈಲಪುರಂನಲ್ಲಿ ಏರ್ಪಡಿಸಿದ್ದ ಔತಣಕೂಟವೊಂದರಲ್ಲಿ ಭಾಗವಹಿಸಿ ತನ್ನ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಶನಿವಾರ ನಸುಕಿನ 4.35ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸಂಸದ ರಾಜೆಂದ್ರನ್ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿರುವುದಾಗಿ ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಕಾರಿನಲ್ಲಿದ್ದ ಎಲ್ಲಾ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಈ ವೇಳೆಗಾಗಲೇ ಸಂಸದ ರಾಜೇಂದ್ರನ್ ಅವರು ಮೃತಪಟ್ಟಿದ್ದರು. ಉಳಿದ ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ವಿಲ್ಲುಪುರಂ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ರಾಜೇಂದ್ರನ್ ಅವರು ರಾಸಾಯನಿಕ ಮತ್ತು ರಸಗೊಬ್ಬರ ಸಂಸದೀಯ ಸ್ಥಾಯೀ ಸಮಿತಿಯಲ್ಲಿ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದರು.
Tamil Nadu: All India Anna Dravida Munnetra Kazhagam (AIADMK) leader and Member of Parliament S Rajendran died in a car accident near Tindivanam, in Viluppuram district, early morning today. Police investigation is underway. (File pic) pic.twitter.com/IeGe9pbuHf
— ANI (@ANI) February 23, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.